BCWD Post Matric Scholarship 2025: ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ(Fee Reimbursement), ಮತ್ತು ವಿದ್ಯಾಸಿರಿ(Vidyasiri) – [ಊಟ ಮತ್ತು ವಸತಿ ಸಹಾಯ ಯೋಜನೆ]ಯ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಯಲು SSP ಪೋರ್ಟಲ್ https://ssp.postmatric.karnataka.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಜುಲೈ 28, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 30, 2025
ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
• ಅಭ್ಯರ್ಥಿಯು ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
• ವಿದ್ಯಾರ್ಥಿಯ ತಂದೆ-ತಾಯಿ/ಪೋಷಕರ ಕುಟುಂಬದ ವಾರ್ಷಿಕ ಆದಾಯವು ಈ ಕೆಳಗಿನಂತಿರಬೇಕು;
- ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ 2.50ಲಕ್ಷ
- ಪ್ರವರ್ಗ-2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ರೂ1.00ಲಕ್ಷ
• ಅರ್ಜಿ ಸಲ್ಲಿಸಲು ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
ಹೆಚ್ಚಿನ ಅರ್ಹತೆಗಳಿಗಾಗಿ ಅಭ್ಯರ್ಥಿಗಳು ತಪ್ಪದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ https://bcwd.karnataka.gov.in/ನ ಸೇವೆಗಳು ಮತ್ತು ಯೋಜನೆಗಳು ವಿಭಾಗದಲ್ಲಿ (ವಿದ್ಯಾರ್ಥಿವೇತನ ಹಾಗೂ ಯೋಜನೆಗಳಿಗೆ ಅನುಗುಣವಾಗಿ)ನೀಡಲಾಗಿರುವ ವಿವರವಾದ ಅರ್ಹತೆಗಳನ್ನು ಪರಿಶೀಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
- ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿಶ್ವವಿದ್ಯಾಲಯದಿಂದ ನೀಡಿರುವ ನೋಂದಣಿ ಸಂಖ್ಯೆ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- 10ನೇ ತರಗತಿ ಅಂಕಪಟ್ಟಿ
- ಮಾನ್ಯವಾದ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆ
How to Apply for SSP BCWD Post Matric Scholarship 2025
ಅರ್ಜಿ ಸಲ್ಲಿಸುವ ವಿಧಾನ;
- SSP ಅಧಿಕೃತ ವೆಬ್ಸೈಟ್https://ssp.postmatric.karnataka.gov.in/ ಗೆ ಭೇಟಿ ನೀಡಿ.
- SSP ಖಾತೆಯಿಂದ ಲಾಗಿನ್ ಆಗಿ ಅಥವಾ ಹೊಸದಾಗಿ SSP ಖಾತೆ ತೆರೆಯಿರಿ.
- ನೀವು ಅರ್ಜಿ ಸಲ್ಲಿಸ ಬಯಸುವ (ವಿದ್ಯಾರ್ಥಿವೇತನ) ಅನ್ನು ಆಯ್ಕೆ ಮಾಡಿ.
- ಬಳಿಕ ವಿದ್ಯಾರ್ಥಿಯ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ನಮೂದಿಸಿ.
- ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| BCWD Post Matric Scholarship 2025 Apply Link | Apply Now |
| Official Website | bcwd.karnataka.gov.in |
| More Updates | KarnatakaHelp.in |
Police