ಬಿಸಿಎಂ ಹಾಸ್ಟೆಲ್: ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on:

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್-ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯಲು ಇಚ್ಛಿಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳು ಅಧಿಕೃತ ಜಾಲತಾಣ https://shp.karnataka.gov.in/bcwdದ ಮೂಲಕ ಸೆ.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರವರ್ಗ-1, ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯಮಿತಿಯು ರೂ. 1.00 ಲಕ್ಷದೊಳಗಿರಬೇಕು.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ- ಆಗಸ್ಟ್‌ 29
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್‌ 30
  • ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಅರ್ಜಿ ಪರಿಶೀಲಿಸಲು ಅಂತಿಮ ದಿನಾಂಕ- ಅಕ್ಟೋಬರ್ 03
  • ತಾಲ್ಲೂಕು ಸಮಿತಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ಪ್ರಕಟಣೆ- ಅಕ್ಟೋಬರ್ 06
  • ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಕೊನೆಯ ದಿನಾಂಕ- ಅಕ್ಟೋಬರ್ 15

ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳು ಎದುರಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ https://bcwd.karnataka.gov.in/ಕ್ಕೆ ಭೇಟಿ ನೀಡಿ. ಸಹಾಯವಾಣಿ ಸಂಖ್ಯೆ: 8050770904 ಅನ್ನು ಸಂಪರ್ಕಿಸಲು ಕೋರಲಾಗಿದೆ.‌

ಪ್ರಮುಖ ಲಿಂಕ್‌ಗಳು:

ಅರ್ಜಿ ಸಲ್ಲಿಸುವ ಲಿಂಕ್(ಡೈರೆಕ್ಟ್‌ ಲಿಂಕ್)ಅರ್ಜಿ ಸಲ್ಲಿಸಿ
ಅಧಿಕೃತ ಜಾಲತಾಣbcwd.karnataka.gov.in
ಮತ್ತಷ್ಟು ಸುದ್ದಿಗಳಿಗಾಗಿ–>>ಕರ್ನಾಟಕಹೆಲ್ಪ್.ಇನ್
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

5 thoughts on “ಬಿಸಿಎಂ ಹಾಸ್ಟೆಲ್: ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ”

Leave a Comment