ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಅಧಿಕೃತ ಜಾಲತಾಣ https://ssp.postmatric.karnataka.gov.in/ಕ್ಕೆ ಭೇಟಿ ನೀಡಿ. ಅ.31ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರು ಹೊರಡಿಸಿದ ಪ್ರಕಟಣೆ ತಿಳಿಸಿದೆ.
ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ & ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
• ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
• ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ ಮತ್ತು ಎಲ್ಲಾ ಧರ್ಮಗಳ, ಜಾತಿಗಳ ಹಾಗೂ ಸಮುದಾಯಗಳಿಗೆ ಸೇರಿರಬೇಕು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು.
• ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯವು ಪುವರ್ಗ-1 ವಿದ್ಯಾರ್ಥಿಗಳಿಗೆ 2.50 ಲಕ್ಷರೂ. ಗಳ ಮಿತಿಯೊಳಗೆ ಇರಬೇಕು.
• ಉಳಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಕುಟುಂಬದ ಒಟ್ಟು ವಾರ್ಷಿಕ ಆದಾಯವು 1ಲಕ್ಷರೂ.ಗಳ ಮಿತಿಯೊಳಗೆ ಇರಬೇಕು.
• ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಅರ್ಹರಿರುವುದಿಲ್ಲ. (ಉದಾ- ಬಿ.ಎ ನಂತರ ಬಿ.ಕಾಂ, ಎಂ.ಎ. (ಕನ್ನಡ) ನಂತರ ಎಂ.ಎ. (ಇಂಗ್ಲೀಷ್), ಬಿ.ಎಡ್ ನಂತರ ಎಲ್.ಎಲ್.ಬಿ. ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ)
• ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ. ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿ ಹಾಗೂ ದಾಖಲೆಗಳು:
ವಿದ್ಯಾರ್ಥಿ ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು
ಮಾನ್ಯವಾದ ಇ-ಮೇಲ್ ಐ.ಡಿ. ಮತ್ತು ಮೊಬೈಲ್ ಸಂಖ್ಯೆ
ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆ
ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
ವಿದ್ಯಾರ್ಥಿಗಳು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಕಡ್ಡಾಯವಾಗಿ ತಮ್ಮ Counselling Details ಅನ್ನು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಮೂದಿಸಬೇಕು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
• ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ https://ssp.postmatric.karnataka.gov.in/ ಗೆ ಭೇಟಿ ನೀಡಿ.
• ಬಳಕೆದಾರರ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಅಗತ್ಯ ಮಾಹಿತಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://bcwd.karnataka.gov.in/ ಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂ – 8050770005, ಇಮೇಲ್ ವಿಳಾಸ bcwdhelpline@gmail.com ಸಂಪರ್ಕಿಸಿ. ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾoಶದ ದೂ.ಸಂ-1902, ಇಮೇಲ್ ವಿಳಾಸ postmatrichelp@karnataka.gov.in ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Important Direct Links:
BCWD Vidhyasiri Scholarship and Fee Reimbursement Application 2025
Super 😍
Swathi. A
Other
Ok sir
12th pass
Scholarship applying
Only online apply
Aishu
I want to take a scholarship for education purposes
I want to take a scholarship for education purpose
Ganguli
Sona
No
Helpful
Education purpose
Eduction purpose only
Scholarship
I need Scholarship for my stady purpose please