ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ (BECIL), ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳ ಭರ್ತಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಪ್ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಬರುವ ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ (BECIL), ಖಾಲಿ ಇರುವ ಒಟ್ಟು 100 ನರ್ಸಿಂಗ್ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. B.Sc ಇನ್ ನರ್ಸಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಅಂಚೆಯ ಮೂಲಕ ನಿಗದಿತ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮಾಡಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರ ಉದ್ಯೋಗ ಬಯಸುತ್ತಿರುವ ಆಕಾಂಕ್ಷಿಗಳು ಅರ್ಹತಾ ಮತ್ತು ಮಾನದಂಡವನ್ನು ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024 ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ಅಧಿಕೃತ ವೆಬ್ ಸೈಟ್ www.becil.com ಗೆ ಭೇಟಿ ನೀಡಿ, ಸೆಪ್ಟೆಂಬರ್ 17 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ BECIL Nursing Officer Vacancy 2024ರ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.
Shortview of BECIL Nursing Officer Notification 2024
Organization Name – Broadcast Engineering Consultants India Limited(BECIL)
Post Name – Nursing Officer
Total Vacancy – 100
Application Process: Offline
Job Location – All Over India
ನೇಮಕಾತಿಯ ಪ್ರಮುಖ ದಿನಾಂಕಗಳು:
- ಆನ್ಲೈನ್ ಮೂಲಕ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ: ಸೆಪ್ಟೆಂಬರ್ 03, 2024
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಸೆಪ್ಟೆಂಬರ್ 17, 2024
ವಿದ್ಯಾರ್ಹತೆ:
ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ BSc ಇನ್ ನರ್ಸಿಂಗ್/GNM ಮತ್ತು 50 ಹಾಸಿಗೆಗಳ ಆಸ್ಪತ್ರೆಯಲ್ಲಿ ಕನಿಷ್ಠ 02 ವರ್ಷಗಳ ಕಾರ್ಯ ಅನುಭವ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 21 ರಿಂದ ಗರಿಷ್ಠ 30 ವರ್ಷಗಳ ಒಳಗೆ ಇರಬೇಕು.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯಲ್ಲಿ ತಿಳಿಸಿದಂತೆ ₹28,000 ಮಾಸಿಕ ವೇತನ ನೀಡಲಾಗುತ್ತಿದೆ.
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ
- ವೈಯಕ್ತಿಕ ಸಂದರ್ಶನ
- ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ – ₹590
- SC/ST/EWS/ PH ಅಭ್ಯರ್ಥಿಗಳಿಗೆ – ₹295
ಪಾವತಿ ವಿಧಾನ – ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಅಂಚೆ ಕಚೇರಿಯಲ್ಲಿ ಹೆಸರಿಗೆ ಡಿಡಿ ಮೂಲಕ ಪಾವತಿ ಮಾಡಬೇಕು.
How to Apply for BECIL Nursing Officer Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ…?: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BECIL ನ ಅಧಿಕೃತ ವೆಬ್ ಸೈಟ್ https://www.becil.com/vacancies ಗೆ ಭೇಟಿ ನೀಡಿ, ಮುಖಪುಟದಲ್ಲಿ ಕಾಣುವ ನೇಮಕಾತಿ ವಿಭಾಗದಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಕಚೇರಿ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮಾಡಬೇಕು.
ಅರ್ಜಿ ಕಳುಹಿಸುವ ಅಂಚೆ ಕಚೇರಿಯ ವಿಳಾಸ:
ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL), BECIL ಭವನ, C-56/A-17, Sector-62, Noida-201307 (UP).
Important Direct Links:
Official Notification PDF | Download |
Official Website | becil.com |
More Updates | Karnataka Help.in |