ಭಾರತ ಸರಕಾರದ ಒಡೆತನದ ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics Limited) ಅಧಿಕೃತ ಅಧಿಸೂಚನೆಯ ಮೂಲಕ 610 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಏರೋಸ್ಪೇಸ್ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳುವ ಉದ್ದೇಶದಿಂದ ಉದ್ಯೋಗವನ್ನು ಅರಸುತ್ತಿದ್ದರೆ ನಿಮಗೆ ಸದವಕಾಶ ಒದಗಿಬಂದಿದೆ. ಆಸಕ್ತರು ಇದೇ ಬರುವ ಅಕ್ಟೋಬರ್ 07 ರ ಒಳಗೆ ಅರ್ಜಿಯನ್ನು ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಈ ಲೇಖನದಲ್ಲಿ ಅರ್ಹತಾ ಮಾನದಂಡಗಳು, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಯಶಸ್ವಿಯಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಹಾಯ ಮಾಡಲು ಇತರ ಪ್ರಮುಖ ಮಾಹಿತಿಯ ಕುರಿತು ಸಂಪೂರ್ಣ ವಿವರಗಳನ್ನು ಒದಗಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- ಸೆಪ್ಟೆಂಬರ್ 24, 2025
ಬಿ.ಇ.ಎಲ್. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಎಸ್ಸಿ, ಬಿ.ಇ. ಅಥವಾ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಧಿಸೂಚನೆಯಂತೆ ಹುದ್ದೆಗೆ ಸೇರಬಯಸುವವರು ಸೆಪ್ಟೆಂಬರ್ 01, 2025 ರ ವೇಳೆಗೆ ಗರಿಷ್ಠ 28 ವರ್ಷ ವಯಸ್ಸಿನ ಒಳಗಿರಬೇಕು. ಇನ್ನು ಒಬಿಸಿ ಅಭ್ಯರ್ಥಿಗಳು 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 5 ವರ್ಷಗಳು ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಮೀಸಲಾತಿಯನ್ನು ನೀಡಲಾಗಿದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ಸಂದರ್ಶನ
ವೇತನ ಹಾಗೂ ಇತರ ಸೌಲಭ್ಯಗಳು:
ತರಬೇತಿ ಎಂಜಿನಿಯರ್ ಆಗಿ ಆಯ್ಕೆಯಾದ ಅರ್ಹ ಅಭ್ಯರ್ಥಿಗೆ ಆಕರ್ಷಕ ವೇತನ ಮತ್ತು ಸೌಲಭ್ಯಗಳನ್ನು ಸಂಸ್ಥೆಯು ನೀಡುತ್ತಿದೆ.
ಮೊದಲ ವರ್ಷ ಮಾಸಿಕ ರೂ. 30,000/
ಎರಡನೇ ವರ್ಷ ಮಾಸಿಕ ರೂ.35,000/
ಮೂರನೇ ವರ್ಷ ಮಾಸಿಕ ರೂ.40,000/
ಸೌಲಭ್ಯಗಳು
ವೈದ್ಯಕೀಯ ಮತ್ತು ಇತರ ಅಗತ್ಯಗಳಿಗೆ ವರ್ಷಕ್ಕೆ ರೂ. 12,000/
ಅಧಿಕೃತ ಕೆಲಸಕ್ಕಾಗಿ ಹೊರಹೋದರೆ ರೂ. 150/ ಊಟ ಭತ್ಯೆ
ಮಾತೃತ್ವ ರಜೆಯಂತಹ ಸೌಲಭ್ಯಗಳನ್ನು ನೀಡಲಾಗುವುದು
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವು ಇರುವುದಿಲ್ಲ. ಇತರ ಎಲ್ಲಾ ಅಭ್ಯರ್ಥಿಗಳು ರೂ.177/- ನ್ನು ಆನ್ ಲೈನ್ ಮೂಲಕ ಪಾವತಿ ಮಾಡುವಂತೆ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಬಿ.ಇ.ಎಲ್. ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
ಟ್ರೈನಿ ಎಂಜಿನಿಯರ್-I ಹುದ್ದೆಗೆ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಗತ್ಯ ಮಾಹಿತಿಯನ್ನು ಪೂರೈಸಿ Registration ಪ್ರಕ್ರಿಯೆ ಪೂರ್ಣಗೊಳಿಸಿ, Login ಡಿಟೇಲ್ಸ್ ಪಡೆದುಕೊಳ್ಳಿ.
ಬಿ.ಇ.ಎಲ್. ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಪೂರೈಸಿರಿ. ನಂತರ ಅಗತ್ಯ ಪ್ರಮಾಣ ಪತ್ರಗಳು, ಉದ್ಯೋಗ ಅನುಭವ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿ ಹಾಗೂ ಭಾವಚಿತ್ರ ಮತ್ತು ಸಹಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಮೇಲೆ ನೀವು ನೀಡಿರುವ ಸಂಪೂರ್ಣ ಮಾಹಿತಿ ಪ್ರತಿ ಹಾಗೂ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯುವುದನ್ನು ಮರೆಯದಿರಿ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.