ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಘಾಜಿಯಾಬಾದ್ ಘಟಕದಲ್ಲಿ ಟ್ರೈನಿ ಎಂಜಿನಿಯರ್, ಆಫೀಸರ್-I ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ವಿವಿಧ ವಿಭಾಗಗಳಲ್ಲಿ 117 ಟ್ರೈನಿ ಎಂಜಿನಿಯರ್ ಹಾಗೂ 02 ಟ್ರೈನಿ ಆಫೀಸರ್-I ಸೇರಿದಂತೆ ಒಟ್ಟು 119 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲಿ ಜ.09 ಕೊನೆಯ ದಿನವಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು BEL ನ ಅಧಿಕೃತ ವೆಬ್ಸೈಟ್ https://coecmamsupport.com/bel/scanqrಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 29, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -ಜನವರಿ 09, 2026
ಲಿಖಿತ ಪರೀಕ್ಷೆ ನಡೆಯುವ ದಿನಾಂಕ – ಜನವರಿ 11, 2026
ಶೈಕ್ಷಣಿಕ ಅರ್ಹತೆ:
✓ ಟ್ರೈನಿ ಎಂಜಿನಿಯರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಎಸ್.ಸಿ/ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
✓ ಟ್ರೈನಿ ಆಫೀಸರ್-I ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಫೈನಾನ್ಸ್ ವಿಷಯದಲ್ಲಿ ಎಂಬಿಎ ಪದವಿ ಪೂರ್ಣಗೊಳಿಸಿರಬೇಕು.