BELನಲ್ಲಿ ಟ್ರೈನಿ ಎಂಜಿನಿಯರ್/ಆಫೀಸರ್-I ಹುದ್ದೆಗಳ ಭರ್ತಿ

ಜ.11ಕ್ಕೆ ಲಿಖಿತ ಪರೀಕ್ಷೆ

Published on:

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಘಾಜಿಯಾಬಾದ್ ಘಟಕದಲ್ಲಿ ಟ್ರೈನಿ ಎಂಜಿನಿಯರ್, ಆಫೀಸರ್-I ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿವಿಧ ವಿಭಾಗಗಳಲ್ಲಿ 117 ಟ್ರೈನಿ ಎಂಜಿನಿಯರ್ ಹಾಗೂ 02 ಟ್ರೈನಿ ಆಫೀಸರ್-I ಸೇರಿದಂತೆ ಒಟ್ಟು 119 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲಿ ಜ.09 ಕೊನೆಯ ದಿನವಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು BEL ನ ಅಧಿಕೃತ ವೆಬ್ಸೈಟ್ https://coecmamsupport.com/bel/scanqrಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 29, 2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ -ಜನವರಿ 09, 2026
  • ಲಿಖಿತ ಪರೀಕ್ಷೆ ನಡೆಯುವ ದಿನಾಂಕ – ಜನವರಿ 11, 2026

ಶೈಕ್ಷಣಿಕ ಅರ್ಹತೆ:

✓ ಟ್ರೈನಿ ಎಂಜಿನಿಯರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಎಸ್.ಸಿ/ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

✓ ಟ್ರೈನಿ ಆಫೀಸರ್-I ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಫೈನಾನ್ಸ್ ವಿಷಯದಲ್ಲಿ ಎಂಬಿಎ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

01-01-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು.

ಆಯ್ಕೆ ವಿಧಾನ:

ಲಿಖಿತ ಪರೀಕ್ಷೆ
ನೇರ ಸಂದರ್ಶನ

ಸಂಬಳ:

ಟ್ರೈನಿ ಎಂಜಿನಿಯರ್/ಆಫೀಸರ್-I ಹುದ್ದೆಗಳಿಗೆ ಆಯ್ಕೆಯಾದವರಿಗೆ ಪ್ರತಿ ತಿಂಗಳು 30,000ರೂ. ಗಳಿಂದ 40,000ರೂ.ವರೆಗೆ ಮಾಹೆಯಾನ ವೇತನ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

ಮೊದಲ ವರ್ಷ – ₹30,000
ಎರಡನೇ ವರ್ಷ – ₹35,000
ಮೂರನೇ ವರ್ಷ – ₹40,000

ಅರ್ಜಿ ಶುಲ್ಕ:

• ಇತರೆ ಎಲ್ಲಾ ಅಭ್ಯರ್ಥಿಗಳಿಗೆ – 150ರೂ.
• ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ‌ ಸಲ್ಲಿಸುವ ವಿಧಾನ:

• ಮೊದಲಿಗೆ ಅಭ್ಯರ್ಥಿಗಳು BEL ನ ಅಧಿಕೃತ ವೆಬ್ಸೈಟ್ https://coecmamsupport.com/bel/scanqr ಗೆ ಭೇಟಿ ನೀಡಿ.

• ನಂತರ ಅಭ್ಯರ್ಥಿಗಳು ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ನಮೂದಿಸಿ.

• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitebel-india.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “BELನಲ್ಲಿ ಟ್ರೈನಿ ಎಂಜಿನಿಯರ್/ಆಫೀಸರ್-I ಹುದ್ದೆಗಳ ಭರ್ತಿ”

Leave a Comment