ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಪ್ರಮುಖ ಬಹು-ತಂತ್ರಜ್ಞಾನ ಕಂಪನಿಯಾಗಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 100 ಜೂನಿಯರ್ ಎಕ್ಸಿಕ್ಯೂಟಿವ್ (ಕಾರ್ಯನಿರ್ವಾಹಕರ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನ.12 ರೊಳಗೆ BEMLನ ಅಧಿಕೃತ ಜಾಲತಾಣ https://cbtexam.bemlindia.in/secuRegister_25OF2025ver9/ದ ಮೂಲಕ ಅರ್ಜಿ ಸಲ್ಲಿಸಿ, ನೇರ ಸಂದರ್ಶನಕ್ಕೆ ಹಾಜರಾಗಬೇಕು.
✓ ಜೂನಿಯರ್ ಎಕ್ಸಿಕ್ಯುಟಿವ್ (ಮೆಕ್ಯಾನಿಕಲ್/ಉತ್ಪಾದನೆ/ಕೈಗಾರಿಕಾ ಎಂಜಿನಿಯರಿಂಗ್) ಹುದ್ದೆಗಳಿಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಒಟ್ಟು 60% ಅಂಕಗಳೊಂದಿಗೆ (ಮೆಕ್ಯಾನಿಕಲ್/ಉತ್ಪಾದನೆ/ಕೈಗಾರಿಕಾ) ಎಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ 02 ವರ್ಷ ವೃತ್ತಿ ಸಂಬಂಧಿತ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
✓ ಜೂನಿಯರ್ ಎಕ್ಸಿಕ್ಯುಟಿವ್ (ಎಲೆಕ್ಟ್ರಿಕಲ್&ಎಂಜಿನಿಯರಿಂಗ್) ಹುದ್ದೆಗಳಿಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಒಟ್ಟು 60% ಅಂಕಗಳೊಂದಿಗೆ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್) ಎಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ 02 ವರ್ಷ ವೃತ್ತಿ ಸಂಬಂಧಿತ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
✓ ಜೂನಿಯರ್ ಎಕ್ಸಿಕ್ಯುಟಿವ್ (ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಇನ್ಸ್ಟ್ರುಮೆಂಟೇಷನ್ ಎಂಜಿನಿಯರಿಂಗ್) ಹುದ್ದೆಗಳಿಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಒಟ್ಟು 60% ಅಂಕಗಳೊಂದಿಗೆ (ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಇನ್ಸ್ಟ್ರುಮೆಂಟೇಷನ್) ಎಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ 02 ವರ್ಷ ವೃತ್ತಿ ಸಂಬಂಧಿತ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ:
12-11-2025 ರಂತೆ;
ಗರಿಷ್ಠ ವಯಸ್ಸಿನ ಮಿತಿ – 29 ವರ್ಷಗಳು
ವಯೋಮಿತಿ ಸಡಿಲಿಕೆ: ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷಗಳು, ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ವಿಧಾನ:
ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ (ಮೊದಲನೇ ವರ್ಷ 35,000ರೂ., 2ನೇ ವರ್ಷ 37,500ರೂ., 3ನೇ ವರ್ಷ 40,000ರೂ. ಹಾಗೂ 4ನೇ ವರ್ಷ 43,000ರೂ.) ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ?
• BEML ವೃತ್ತಿಜೀವನದ ಅಧಿಕೃತ ವೆಬ್ಸೈಟ್ https://cbtexam.bemlindia.in/ಗೆ ಭೇಟಿ ನೀಡಿ.
Beml Junior Executive Online Application Form 2025
• ಅಧಿಸೂಚನೆಗಳು ವಿಭಾಗದಲ್ಲಿ “KP/S/25/2025 ನಿಗದಿತ ಅವಧಿ (ಒಪ್ಪಂದ) ಆಧಾರದ ಮೇಲೆ ಕಿರಿಯ ಕಾರ್ಯನಿರ್ವಾಹಕರ ನೇಮಕಾತಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ಹೆಸರು/ ಜನ್ಮ ದಿನಾಂಕ/ ಮೊಬೈಲ್ ಸಂಖ್ಯೆ/ ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌಗ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
ನೇರ ಸಂದರ್ಶನ ನಡೆಯುವ ಸ್ಥಳ ಹಾಗೂ ದಿನಾಂಕ
ಜೂ.ಎಕ್ಸಿಕ್ಯುಟಿವ್ (ಮೆಕ್ಯಾನಿಕಲ್/ಉತ್ಪಾದನೆ/ಕೈಗಾರಿಕಾ ಎಂಜಿನಿಯರಿಂಗ್) ಹಾಗೂ ಜೂ.ಎಕ್ಸಿಕ್ಯುಟಿವ್ (ಎಲೆಕ್ಟ್ರಿಕಲ್ & ಎಂಜಿನಿಯರಿಂಗ್) ಹುದ್ದೆಗಳಿಗೆ ನ.15ರಂದು ಹಾಗೂ ಜೂ.ಎಕ್ಸಿಕ್ಯುಟಿವ್ (ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಇನ್ಸ್ಟ್ರುಮೆಂಟೇಷನ್ ಎಂಜಿನಿಯರಿಂಗ್) ಹುದ್ದೆಗಳಿಗೆ ನ.16ರಂದು ಈ ಕೆಳಗಿನ ವಿಳಾಸದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ.
ವಿಳಾಸ: ಬಿಇಎಂಎಲ್ ಕಲಾಮಂದಿರ ಬಿಇಎಂಎಲ್ ಟೌನ್ಶಿಪ್, ಬೆಂಗಳೂರು -560075