ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಶಿಶು ಅಭಿವೃದ್ದಿ ಯೋಜನೆಯಡಿ ಬೆಂಗಳೂರು ಪೂರ್ವ ವ್ಯಾಪ್ತಿಯ 22 ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು(22) ಹಾಗೂ ಸಹಾಯಕಿಯರು (22) ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಫ್‌ಲೈನ್ ಮೂಲಕ ಅರ್ಜಿ
ಆಸಕ್ತ ಮಹಿಳಾ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, 3ನೇ ಮಹಡಿ, ಅಂಚೆ ಕಚೇರಿ ಎದುರು ಆರ್.ಟಿ. ನಗರ ಮುಖ್ಯರಸ್ತೆ, ಬೆಂಗಳೂರುʼ ಇಲ್ಲಿ ಪಡೆದು ನ.30ರೊಳಗಾಗಿ ಸಲ್ಲಿಸಬಹುದು ಎಂದು ಬೆಂಗಳೂರು ಪೂರ್ವ ಶಿಶು ಅಭಿವೃದ್ದಿ ಯೋಜನಾಧಿಕಾಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.