ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕ

ಅ.02 ತನಕ ಗಡುವು | ಆಸಕ್ತರು ಅರ್ಜಿ ಸಲ್ಲಿಸಿ

Published on:

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸ್ವೀಕಾರ ಈಗಾಗಲೇ ಪ್ರಾರಂಭವಾಗಿದೆ.

(ಮಧ್ಯಮ ಆಡಳತ ಪರ್ಗ-1) ಉಪ ಪ್ರಧಾನ ವ್ಯವಸ್ಥಾಪಕ[ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO)] ಮತ್ತು (ಕಿರಿಯ ಆಡಳತ ವರ್ಗ-1) ಶಾಖಾ ವ್ಯವಸ್ಥಾಪಕ[ಮಾಹಿತಿ ತಂತ್ರಜ್ಞಾನ ವ್ಯವಸ್ಥಾಪಕ (IT)] ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BDCC ಅಧಿಕೃತ ಜಾಲತಾಣ https://virtualofficeerp.com/bdccb2025/instructionಕ್ಕೆ ಭೇಟಿ ನೀಡಿ. ಅಕ್ಟೋಬರ್ 02ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 17, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 02, 2025
  • ಆನ್ಲೈನ್ ನಲ್ಲಿ ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ – ಅಕ್ಟೋಬರ್ 02, 2025

ಶೈಕ್ಷಣಿಕ ಅರ್ಹತೆ:

✓ ಉಪ ಪ್ರಧಾನ ವ್ಯವಸ್ಥಾಪಕರು (CISO) ಹುದ್ದೆಗಳಿಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಸಿ.ಎ/ಎಂ.ಎಸ್ಸಿ/ಕಂಪ್ಯೂಟರ್ ಸೈನ್ಸ್ /ಎಂ.ಸಿ.ಎಸ್/ಸಿಸ್ಟಮ್ಸ್ ವಿಶೇಷತೆಯೊಂದಿಗೆ ಎಂಬಿಎ ಅಥವಾ ಸಂಬಂಧಿತ ವಿಭಾಗದಲ್ಲಿ ಬಿ.ಇ ಹಾಗೂ ಎಂ.ಟೆಕ್/ ಎಂ.ಇ/ಎಂಬಿಎ ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ 5 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.

✓ ಶಾಖಾ ವ್ಯವಸ್ಥಾಪಕರು (IT Manager) ಹುದ್ದೆಗಳಿಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಷಯದಲ್ಲಿ ಬಿಇ / ಬಿ.ಟೆಕ್ ಅಥವಾ ಎಂ.ಸಿ.ಎ/ಎಂ.ಎಸ್ಸಿ/ಕಂಪ್ಯೂಟರ್ ಸೈನ್ಸ್ / ಎಂ.ಸಿ.ಎಸ್ ಅಥವಾ ಸಿಎ/ಎಂ.ಕಾಂ ಜೊತೆಗೆ ಪ್ರತಿಷ್ಠಿತ ಸಂಸ್ಥೆಯಿಂದ ಕನಿಷ್ಠ ಆರು ತಿಂಗಳ ಅವಧಿಯ ಕಂಪ್ಯೂಟರ್‌ಗಳಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ 5 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.

ಅಭ್ಯರ್ಥಿಗಳ ಗಮನಕ್ಕೆ; ಅಭ್ಯರ್ಥಿಗಳು ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ. ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳುವ ಅರ್ಹತೆ ಹೊಂದಿರಬೇಕು.

ವಯೋಮಿತಿ:

02-10-2025 ರಂತೆ;

ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 38 ವರ್ಷಗಳು
  • ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು

ಆಯ್ಕೆ ವಿಧಾನ:

  • ಲಿಖಿತ ಪರೀಕ್ಷೆ
  • ಸಂದರ್ಶನ
  • ದಾಖಲೆ ಪರಿಶೀಲನೆ
  • ಅಂತಿಮ ಆಯ್ಕೆ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ 65950ರೂ. – 134200ರೂ. ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 2000ರೂ.

ಅರ್ಜಿ‌ ಸಲ್ಲಿಸುವ ವಿಧಾನ

• BDCC ಅಧಿಕೃತ ಜಾಲತಾಣ https://virtualofficeerp.com/bdccb2025/instruction ಕ್ಕೆ ಭೇಟಿ ನೀಡಿ.

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.

• ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಕೊನೆಯಲ್ಲಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣವನ್ನು ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.bengalurudccbank.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕ”

Leave a Comment