ಬೆಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ ನೇಮಕಾತಿ

ಪಿಯುಸಿ, ಡಿಪ್ಲೋಮಾ ಅರ್ಹತೆ

Published on:

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 21 ಶೀಘ್ರಲಿಪಿಗಾರ ಗ್ರೇಡ್-III (04 ಹಿಂಬಾಕಿ ಮತ್ತು 17 ಹೊಸ ಹುದ್ದೆಗಳು) ಹುದ್ದೆಗಳ ಭರ್ತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ 18-45 ವಯೋಮಾನದ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://bengalururural.dcourts.gov.in/ದ ಮೂಲಕ ಸೆ.15ರೊಳಗೆ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಆಗಸ್ಟ್‌ 17
  • ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಸೆಪ್ಟೆಂಬರ್‌ 15(ರಾತ್ರಿ 11:59 ರವರೆಗೆ)

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು (Senior Grade Typewriting) ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿ (Senior Grade Shorthand) ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಕಚೇರಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಬಳಕೆ ಜ್ಞಾನ ಅವಶ್ಯಕವಾಗಿರುತ್ತದೆ.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನ್ವಯಿಸುವಂತೆ;

ಕನಿಷ್ಠ ವಯೋಮಿತಿ: 18 ವರ್ಷಗಳು.

ಗರಿಷ್ಠ ವಯೋಮಿತಿ:

ಸಾಮಾನ್ಯ ವರ್ಗ: 35 + 5* ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ: 38 + 5* ವರ್ಷಗಳು
ಪ.ಜಾ, ಪ.ಪಂ ಮತ್ತು ಪ್ರವರ್ಗ-1: 40 + 5* ವರ್ಷಗಳು

(ಗಮನಿಸಿ: ಸರ್ಕಾರದ ಆದೇಶದನ್ವಯ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ).

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ:

  • ಕೌಶಲ ಪರೀಕ್ಷೆ
  • ಸಂದರ್ಶನ
  • ಅಂತಿಮ ಆಯ್ಕೆ ಪಟ್ಟಿ

ಸಂಬಳ:

ವೇತನ ಶ್ರೇಣಿ; ರೂ.44,425-1,125-47,800-1,250-52,800-1,375-58,300-1,500-64,300-1,650-74,200-1,900-83,700/-

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.200/-
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕವನ್ನು ಆನ್‌ಲೈನ್ ಪಾವತಿ (Net Banking/Credit Card/Debit Card/UPI ID/QR Code) ಮೂಲಕ ಮಾತ್ರ ಪಾವತಿಸತಕ್ಕದ್ದು. ಡಿಡಿ, ಪೋಸ್ಟಲ್ ಆರ್ಡರ್ ಅಥವಾ ಚಲನ್ ಸ್ವೀಕರಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ.?

ಆಸಕ್ತ ಅರ್ಹ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣದ “ನೇಮಕಾತಿ” ವಿಭಾಗಕ್ಕೆ https://bengalururural.dcourts.gov.in/notice-category/recruitments/ಕ್ಕೆ ಭೇಟಿ ನೀಡಿ. ನಂತರ “Notification No. ADM/99/2026 dated:10.08.2026.” ಎಂಬ ಶೀರ್ಷಿಕೆಯಡಿ “Description“ನಡಿ ಲಭ್ಯವಾಗುವ ಅರ್ಜಿ ನಮೂನೆ ಲಿಂಕ್‌ ಬಳಸಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ಲಿಂಕ್‌ಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್‌ಡೌನ್ಲೋಡ್‌ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಕೆ ಲಿಂಕ್(ಆ.17ರಿಂದ)ಅರ್ಜಿ ಸಲ್ಲಿಸಿ
ಅಧಿಕೃತ ಜಾಲತಾಣbengalururural.dcourts.gov.in
ಮತ್ತಷ್ಟು ಸುದ್ದಿಗಳಿಗಾಗಿ —>>>KarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment