ಬೆಂಗಳೂರು ನಗರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಒಟ್ಟು 6 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪಿಯುಸಿ ಮತ್ತು ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಟ್ ಪಡೆದುಕೊಂಡಿರುವ ಅಭ್ಯರ್ಥಿಗಳಿಗೆ ಇದು ಸೂಕ್ತ ಹುದ್ದೆ ಆಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಭರ್ತಿ ಮಾಡಿ ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಲು ಅಧಿಕೃತ ವೆಬ್ ಸೈಟ್ zpbengaluruurban.karnataka.gov.in ನಲ್ಲಿ ಪಡೆದುಕೊಳ್ಳಬಹುದು. ಈ ಲೇಖನದಲ್ಲಿ ಬೆಂಗಳೂರು ನಗರ ಗ್ರಾಮ ಪಂಚಾಯತ್ ನೇಮಕಾತಿ 2024(Bengaluru Urban ZP Recruitment 2024) ನೇಮಕಾತಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Bengaluru Urban Zilla Panchayat Recruitment 2024
Shortview of Bengaluru Urban Zilla Panchayat Recruitment 2024
Organization Name – Bengaluru Urban Zilla Grama Panchayat Post Name – Library Supervisor Total Vacancy – 06 Application Process: Offline Job Location – Bengaluru Urban
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಜುನ್ 25, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 13, 2024
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಆಯ್ಕೆ ಪ್ರಕ್ರಿಯೆ;
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
How to Apply for Bengaluru Urban Zilla Panchayat Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು. ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಖಾಲಿ ಇರುವ ಹುದ್ದೆಗಳ ಗ್ರಾಮ ಪಂಚಾಯಿತಿಯನ್ನು ತಿಳಿದುಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನೋಡಿ.