ಸಾರ್ವಜನಿಕ ಉದ್ಯಮ ಆಯ್ಕೆ ಮಂಡಳಿಯು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL)ನಲ್ಲಿ ಖಾಲಿ ಇರುವ ನಿರ್ದೇಶಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ನಿರ್ದೇಶಕರು (ಮಾನವ ಸಂಪನ್ಮೂಲ HR) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BPCL ನ ಅಧಿಕೃತ ವೆಬ್ಸೈಟ್ www.bharatpetroleum.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಉತ್ತಮ ಶೈಕ್ಷಣಿಕ ದಾಖಲೆಯೊಂದಿಗೆ ಪದವೀಧರರಾಗಿರಬೇಕು.
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸ್ನಾತಕೋತ್ತರ ಡಿಪ್ಲೊಮಾ ಅಥವಾ ಸಿಬ್ಬಂದಿ ನಿರ್ವಹಣೆ/ ಮಾನವ ಸಂಪನ್ಮೂಲ ನಿರ್ವಹಣೆಯಲ್ಲಿ ಪದವಿ ಅಥವಾ ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿ (MBA)/ ಸ್ನಾತಕೋತ್ತರ ಡಿಪ್ಲೊಮಾ (PGDM) / ಮ್ಯಾನೇಜ್ಮೆಂಟ್ ನಲ್ಲಿ ಸ್ನಾತಕೋತ್ತರ ಕಾರ್ಯಕ್ರಮ (PGPM) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕನಿಷ್ಠ ಮಿತಿ – 45 ವರ್ಷಗಳು
ಗರಿಷ್ಠ ಮಿತಿ – 60 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
How to Apply Bharat Petroleum Director Vacancy 2025
ಅರ್ಜಿ ಸಲ್ಲಿಸುವ ವಿಧಾನ;
BPCL ನ ಅಧಿಕೃತ ವೆಬ್ಸೈಟ್ https://www.bharatpetroleum.in/Careers/Job-Openings.aspxಗೆ ಭೇಟಿ ನೀಡಿ. ನೇಮಕಾತಿಯ ಸಂಪೂರ್ಣ ಅಧಿಸೂಚನೆಯನ್ನು ಓದಿ.
ಸಾರ್ವಜನಿಕ ಉದ್ಯಮ ಆಯ್ಕೆ ಮಂಡಳಿ (PESB) ನ ಅಧಿಕೃತ ವೆಬ್ಸೈಟ್ https://pesb.gov.in/UserAccount/Loginಗೆ ಭೇಟಿ ನೀಡಿ.
ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್(BPCL) ನಿರ್ದೇಶಕರು (ಮಾನವ ಸಂಪನ್ಮೂಲ HR) ನೇಮಕಾತಿ-2025 ಅರ್ಜಿ ನಮೂನೆ ಹುಡುಕಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.