2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನದ ಜೊತೆಗೆ ಸಾಲ ಸೌಲಭ್ಯವನ್ನು ನೀಡಲು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರವು ಪರಿಶಿಷ್ಟ ಜಾತಿಯಲ್ಲಿ ಬರುವ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಸದುದ್ದೇಶದಿಂದ ಯೋಜನೆಗಳಾದ ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಭೂ ಒಡೆತನ ಯೋಜನೆ ಸೇರಿ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್https://sevasindhu.karnataka.gov.in/ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ಯೋಜನೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ಅರ್ಹತೆಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
ಬ್ಯಾಂಕ್ಗಳ ಸಹಯೋಗದೊಂದಿಗೆ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಭಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್, ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್ ಹೈನುಗಾರಿಕೆ, ಇತರೆ ಉದ್ದೇಶ
ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ
ಗಂಗಾ ಕಲ್ಯಾಣ ಯೋಜನೆ
ಭೂ ಒಡೆತನ ಯೋಜನೆ
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದ ಭೋವಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ 15 ವರ್ಷದಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ ಅರೆಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
• ಅರ್ಜಿದಾರ ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
• ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ 1,50,000ರೂ., ಹಾಗೂ ನಗರ ಪ್ರದೇಶದ ಅಭ್ಯರ್ಥಿಗಳಿಗೆ 2 ಲಕ್ಷ ರೂ.ಗಳ ಮಿತಿಯಲ್ಲಿರಬೇಕು.
• ಭೂಒಡೆತನ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಾಗಿರಬೇಕು. ಜಮೀನು ಮಾರಾಟ ಮಾಡುವ ಭೂಮಾಲೀಕರು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬಾರದು.
• ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷೆಯು ಸಣ್ಣಮತ್ತು ಅತಿಸಣ್ಣ ರೈತರಾಗಿರಬೇಕು.
• ವಾಹನಗಳ ಸೌಲಭ್ಯ ಪಡೆಯಲು ಅಭ್ಯರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ವಯೋಮಿತಿ:
• ಅರ್ಜಿದಾರರು ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸಿನ ಮಿತಿ – 21ವರ್ಷಗಳು, • ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು
• ಕೃಷಿ ಮತ್ತು ಕೃಷಿ ಆಧಾರಿತ ಚಟುವಟಿಕೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ – 21 ವರ್ಷಗಳು, • ಗರಿಷ್ಠ ವಯೋಮಿತಿ – 60 ವರ್ಷಗಳು
ಪ.ಜಾತಿಯ ಭೋವಿ ಜನಾಂಗದ ಅಂಗವಿಕಲ ಫಲಾಪೇಕ್ಷಿಗಳು
ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೊಂದಣಿ ಮಾಡಿಕೊಂಡ ಪ.ಜಾತಿಯ ಭೋವಿ ಜನಾಂಗದ ಅಂಗವಿಕಲ ಫಲಾಪೇಕ್ಷಿಗಳಿಗೆ ನೇರವಾಗಿ ಜಿಲ್ಲಾ ವ್ಯವಸ್ಥಾಪಕರ ಪರಿಶೀಲನೆ ಅನ್ವಯ ಸೌಲಭ್ಯ ಕಲ್ಪಿಸಲಾಗುವುದು, ವಿಕಲ ಚೇತನರು ಸೌಲಭ್ಯ ಪಡೆಯಲು ಸಂಬಂಧಪಟ್ಟ ದೃಢೀಕರಣಪತವನ್ನು ನೀಡಬೇಕು.
ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳು
ಭಾವಚಿತ್ರ
ಜಾತಿ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು)
ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು)
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ಬುಕ್
How to Apply for Bhovi Abhivrudhi Nigam Subsidy Loan Scheme Online Application 2025
ಬಂಧುಗಳೇ, ಅರ್ಜಿ ಸಲ್ಲಿಸಲು ನಿಮಗೆ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್/ಬಾಪೂಜಿ ಆನ್ಲೈನ್ ಸೇವಾ ಕೇಂದ್ರಗಳಿಗೆ ನಿಗದಿತ ದಾಖಲೆ ಸಮೇತ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಈ ಕೆಳಗಿನ ವಿಧಾನಗಳನ್ನು ಅನುಸರಿಸಿ;
• ಸೇವಾ ಸಿಂಧು ಪೋರ್ಟಲ್https://sevasindhu.karnataka.gov.in/Sevasindhu/Kannada?ReturnUrl=%2Fಗೆ ಭೇಟಿ ನೀಡಿ.
• ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ನೀವು ಅರ್ಜಿ ಸಲ್ಲಿಸ ಬಯಸುವ ಯೋಜನೆಯನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Bhovi Abhivrudhi Nigam Subsidy Loan Scheme Online Application 2025 Link