ಬೀದರ್: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ 08 ತಾಲ್ಲೂಕುಗಳಲ್ಲಿ (ಬೀದರ್, ಭಾಲ್ಕಿ, ಬಸವಕಲ್ಯಾಣ, ಹುಲಸೂರು, ಹುಮನಾಬಾದ, ಚಿಟಗುಪ್ಪಾ, ಔರಾದ ಮತ್ತು ಕಮಲನಗರ) ಒಟ್ಟು 110 ಅಂಗನವಾಡಿ ಕಾರ್ಯಕರ್ತೆ ಮತ್ತು 331 ಅಂಗನವಾಡಿ ಸಹಾಯಕಿ ಹುದ್ದೆಗೆ ಭರ್ತಿ ನಡೆಯಲಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ- ನವೆಂಬರ್ 11
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 11
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ; ಮಾನ್ಯತೆ ಪಡೆದ ಮಹಾವಿದ್ಯಾಲಯ/ಸಂಸ್ಥೆಯಿಂದ ದ್ವಿತೀಯ ಪಿಯುಸಿ ಅರ್ಹತೆ ಹೊಂದಿರಬೇಕು. ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸಿರಬೇಕು.
ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಡಿಎಸ್‌ಇಆರ್‌ಟಿಯಿಂದ ಇಸಿಸಿಇ ಡಿಪ್ಲೋಮಾ ಕೋರ್ಸ್, ಜೆಒಸಿ ಕೋರ್ಸ್, ಎನ್‌ಐಟಿ ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೋಮಾ ನ್ಯೂರ್ಟಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೆಟ್ ಕೋರ್ಸ, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡಲಾಗುತ್ತದೆ.
ಅಂಗನವಾಡಿ ಸಹಾಯಕಿ ಹುದ್ದೆಗೆ; ಮಾನ್ಯತೆ ಪಡೆದ ಮಂಡಳಿ/ಸಂಸ್ಥೆಯಿಂದ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು, ಗರಿಷ್ಠ 625 ಕನಿಷ್ಠ 219 ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ರಿಂದ ಗರಿಷ್ಠ 35 ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
ಆಯ್ಕೆ ಪ್ರಕ್ರಿಯೆ ಮತ್ತು ಹುದ್ದೆಯ ಸ್ವರೂಪ:
- ಈ ಹುದ್ದೆಗಳು ತಾತ್ಕಾಲಿಕ ಮತ್ತು ಗೌರವ ಧನದ ಆಧಾರಿತವಾಗಿರುತ್ತವೆ.
- ಆಯ್ಕೆಯಾದ ಅಭ್ಯರ್ಥಿಗಳು ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.
- ಆಯ್ಕೆ ಪ್ರಕ್ರಿಯೆಯು ಸರ್ಕಾರ ಮತ್ತು ನಿರ್ದೇಶನಾಲಯದ ನಿಯಮಗಳು, ಮಾರ್ಗದರ್ಶನಗಳು ಮತ್ತು ಆದೇಶಗಳಿಗೆ ಒಳಪಟ್ಟಿರುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಅಧಿಕೃತ ಜಾಲತಾಣ https://bidar.nic.in/en/announcements/ದಲ್ಲಿ ಲಭ್ಯವಿರುವ ಸೇವಾಸಿಂಧು ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಮುಖ್ಯ ಲಿಂಕ್‌ಗಳು:
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಡೌನ್ಲೋಡ್ ಮಾಡಿ |
| ಆನ್‌ಲೈನ್ ಅರ್ಜಿ ನಮೂನೆ ಲಿಂಕ್ | ಈಗಲೇ ಅರ್ಜಿ ಸಲ್ಲಿಸಿ |
| ಅಧಿಕೃತ ಜಾಲತಾಣ | bidar.nic.in |
| ಮತ್ತಷ್ಟು ಸುದ್ದಿಗಳಿಗಾಗಿ | ಕರ್ನಾಟಕಹೆಲ್ಪ್.ಇನ್ |