WhatsApp Channel Join Now
Telegram Group Join Now

BMRCL Assistant Security Officer Vacancy 2024: ಸಹಾಯಕ ಭದ್ರತಾ ಅಧಿಕಾರಿಗಳ (ASO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಸಹಾಯಕ ಭದ್ರತಾ ಅಧಿಕಾರಿಗಳ (ASO) ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಸಹಾಯಕ ಭದ್ರತಾ ಅಧಿಕಾರಿಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯಲ್ಲಿ ಒಟ್ಟು 58 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಕ್ಷಣಾ ಸೇವೆಗಳಿಂದ ನಿವೃತ್ತರಾದ ಸಿಬ್ಬಂದಿ. ರಾಜ್ಯ ಪೊಲೀಸ್ ಇಲಾಖೆಯಿಂದ ಇನ್‌ಸ್ಪೆಕ್ಟರ್/ಸಬ್ ಇನ್‌ಸ್ಪೆಕ್ಟರ್/ಎಎಸ್‌ಐ ಅಥವಾ ತತ್ಸಮಾನ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಈ ಹುದ್ದೆಗಳಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ‌.

Bmrcl Assistant Security Officer Recruitment 2024
Bmrcl Assistant Security Officer Recruitment 2024

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಭರ್ತಿ ಮಾಡಿ ನಿಗದಿತ ಕಚೇರಿಯ ವಿಳಾಸಕ್ಕೆ ಸೆಪ್ಟೆಂಬರ್ 13ರ ಒಳಗೆ ಪೋಸ್ಟ್ ಮೂಲಕ ತುಂಬಿದ ಲಕೋಟೆಯಲ್ಲಿ ಸಲ್ಲಿಸಬೇಕು  ಈ ಲೇಖನದಲ್ಲಿ BMRCL Assistant Security Officer Vacancy 2024 ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಗಸ್ಟ್ 14, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 9 2024
  • ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಗೆ ತಲುಪಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 13,  2024

ಖಾಲಿ ಇರುವ ಹುದ್ದೆಗಳ ವಿವರ:

ಸಹಾಯಕ ಭದ್ರತಾ ಅಧಿಕಾರಿ – 58 ಹುದ್ದೆಗಳು

ಅರ್ಹತೆಗಳು:

ಜೂನಿಯರ್ ಕಮಿಷನ್ಡ್ ಆಫೀಸರ್ / ಸುಬೇದಾರ್ ಮೇಜರ್ / ಸುಬೇದಾರ್ / ಪೆಟ್ಟಿ ಆಫೀಸರ್ / ಮಾಸ್ಟರ್ ಚೀಫ್ ಪೆಟಿ ಆಫೀಸರ್ / ಮಾಸ್ಟರ್ ವಾರಂಟ್ ಆಫೀಸರ್ / ವಾರಂಟ್ ಆಫೀಸರ್ ಅಥವಾ ಸಮಾನ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಥವಾ ರಕ್ಷಣಾ ಸೇವೆಗಳಿಂದ ನಿವೃತ್ತರಾದ ಸಿಬ್ಬಂದಿ. ರಾಜ್ಯ ಪೊಲೀಸ್ ಇಲಾಖೆಯಿಂದ ಇನ್‌ಸ್ಪೆಕ್ಟರ್/ಸಬ್ ಇನ್‌ಸ್ಪೆಕ್ಟರ್/ಎಎಸ್‌ಐ ಅಥವಾ ತತ್ಸಮಾನ ಹುದ್ದೆ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 60 ವರ್ಷದ ಒಳಗಿರಬೇಕು.

ವೇತನ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  ₹32,950/ ರಿಂದ ₹30,000 ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಾರ್ಯ ಅನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಆಯ್ಕೆ ಸಮಿತಿಯು ಸಂದರ್ಶನದ ನಡೆಸಿ  ಶಾರ್ಟ್‌ಲಿಸ್ಟ್ ಮಾಡಿ, ಅಭ್ಯರ್ಥಿಗಳು ದೈಹಿಕ ಪರೀಕ್ಷೆ ಯನ್ನು ನಡೆಸಲಾಗುತ್ತದೆ.

ಕನ್ನಡ ಭಾಷೆ ತಿಳಿದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

Also Read: ESIC Karnataka Vacancy 2024: ಅರೆಕಾಲಿಕ ಉಪನ್ಯಾಸಕರ ಹುದ್ದೆಗಳ ನೇಮಕಾತಿ

How to Apply for BMRCL Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಮೊದಲಿಗೆ ಅಧಿಕೃತ ವೆಬ್‌ಸೈಟ್‌ https://english.bmrc.co.in/ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ

ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು -560027

Important Direct Links:

Official Notification PDFDownload
Online Application Form LinkApply Here
Official Websitebmrc.co.in
More UpdatesKarnatakaHelp.in

Leave a Comment