ಬೆಂಗಳೂರು ಮೆಟ್ರೋ ನಿಗಮದಲ್ಲಿ ಡೆವಲಪರ್ ಹುದ್ದೆಗಳ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ

ಸದರಿ ಬಿ.ಎಂ.ಆರ್.ಸಿ.ಎಲ್‌ನ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿ ವಿವರಿಸಲಾಗಿದೆ

Published on:

ಬೆಂಗಳೂರು ಮೆಟ್ರೋ ರೈಲು ನಿಗಮವು ತನ್ನ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಆಕ್ಸ್‌ಪರ್ಟ್‌ ಡೆವಲಪರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಒಟ್ಟು 05 ಆಕ್ಸ್‌ಪರ್ಟ್ ಡೆವಲಪರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು, ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು BMRCL ಅಧಿಕೃತ ಜಾಲತಾಣದ https://english.bmrc.co.in/career/ನ ಮೂಲಕ ಸೆಪ್ಟೆಂಬರ್ 8 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಉಪ ಪ್ರಧಾನ ವ್ಯವಸ್ಥಾಪಕ (Hr) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಆಗಸ್ಟ್ 14, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 8, 2025
  • ಅರ್ಜಿಯ ಸಹಿ ಮಾಡಿದ ಮುದ್ರಣವನ್ನು ಸ್ವೀಕರಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 12, 2025

ಶೈಕ್ಷಣಿಕ ಅರ್ಹತೆ:

BMRCL ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿಇ/ಬಿ.ಟೆಕ್/ಬಿಸಿಎ/ಬಿಎಸ್ಸಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.

• ಕನ್ನಡ ಭಾಷೆ ತಿಳಿದಿರುವವರಿಗೆ ಆದ್ಯತೆ ನೀಡಲಾಗುವುದು.

ವಯಸ್ಸಿನ ಮಿತಿ:

ಗರಿಷ್ಠ ವಯಸ್ಸಿನ ಮಿತಿ – 36 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 62,500ರೂ.ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಗಿರುವುದಿಲ್ಲ.

How to Apply for BMRCL Axpert Developer Recruitment 2025

ಅರ್ಜಿ ಸಲ್ಲಿಸುವ ವಿಧಾನ

  1. BMRCL ಅಧಿಕೃತ ವೆಬ್ ಸೈಟ್ https://english.bmrc.co.in/career/ ಗೆ ಭೇಟಿ ನೀಡಿ.
  2. ಅಧಿಸೂಚನೆ ಸಂಖ್ಯೆ BMRCL/HR/0015/IT /2025/Axpert Developer – ವಿಭಾಗದ ಕೆಳಗೆಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಲಿಂಕ್ ಮೇಲೆ ಟ್ಯಾಪ್ ಮಾಡಿ.
  3. ಅಧಿಸೂಚನೆ ಸಂಖ್ಯೆ ಹಾಗೂ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
  4. ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ- ವಿವರ ಹಾಗೂ ಅಗತ್ಯ ಶೈಕ್ಷಣಿಕದ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  5. ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  6. ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಸಲ್ಲಿಸಿದ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

✓ ಉಪ ಪ್ರಧಾನ ವ್ಯವಸ್ಥಾಪಕರು (ಮಾನವ ಸಂಪನ್ಮೂಲ), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್. ರಸ್ತೆ, ಶಾಂತಿನಗರ, ಬೆಂಗಳೂರು 560027

ಲಕೋಟೆಯ ಮೇಲೆ • “ಆಕ್ಸರ್ಟ್ ಡೆವಲಪರ್ ಹುದ್ದೆಗೆ ಅರ್ಜಿ” ಎಂದು ಬರೆಯಬೇಕು.

ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ, BMRCL ಇಮೇಲ್‌ ಐಡಿ helpdesk@bmrc.co.in ಅನ್ನು ಸಂಪರ್ಕಿಸಿ.(ಇಮೇಲ್‌ನಲ್ಲಿ ನಿಮ್ಮ ಸಂಪರ್ಕ ಸಂಖ್ಯೆಯನ್ನು ನಮೂದಿಸಿ).

Important Direct Links:

Official Notification PDFDownload
Online Application Form LinkApply Now
Official Websitebmrc.co.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

9 thoughts on “ಬೆಂಗಳೂರು ಮೆಟ್ರೋ ನಿಗಮದಲ್ಲಿ ಡೆವಲಪರ್ ಹುದ್ದೆಗಳ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ”

Leave a Comment