BMRCL General Manager(GM) Recruitment 2024: ಬೆಂಗಳೂರಿನ ನಮ್ಮ ಮೆಟ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಬಿಎಂಆರ್‌ಸಿಎಲ್ ಸಂಸ್ಥೆಯಲ್ಲಿ ಖಾಲಿಯಿರುವ ಪ್ರಧಾನ ವ್ಯವಸ್ಥಾಪಕರು ಮತ್ತು ಉಪ ಪ್ರಧಾನ ವ್ಯವಸ್ಥಾಪಕರ ಒಟ್ಟು 03 ಹುದ್ದೆಗಳ ಭರ್ತಿ ಮಾಡಲು ಸಂಸ್ಥೆಯು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ನಿಗದಿತ ಕಚೇರಿಗೆ ಅರ್ಜಿ ಪ್ರತಿಯನ್ನು ಸಲ್ಲಿಸಬೇಕು. ಅಗಸ್ಟ್ 20ರ ಒಳಗೆ ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು english.bmrc.co.in ನಲ್ಲಿ ಪಡೆದುಕೊಳ್ಳಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of BMRCL General Manager Notification 2024
Organization Name – Bangalore Metro Rail Corporation Limited Post Name – General Manager(HR) Total Vacancy – 03 Application Process: Online Job Location – Bengaluru
Important Dates(ಪ್ರಮುಖ ದಿನಾಂಕಗಳು):
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-07-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಆಗಸ್ಟ್-2024
ಅರ್ಜಿಯ ಸಹಿ ಮಾಡಿದ ಪ್ರಿಂಟ್ ಔಟ್ ಸ್ವೀಕೃತಿಯ ಕೊನೆಯ ದಿನಾಂಕ: 20-ಆಗಸ್ಟ್-2024
ಖಾಲಿ ಇರುವ ಹುದ್ದೆಗಳ ವಿವರ:
ಪ್ರಧಾನ ವ್ಯವಸ್ಥಾಪಕರು – 1
ಉಪ ಪ್ರಧಾನ ವ್ಯವಸ್ಥಾಪಕರು – 2
ಶೈಕ್ಷಣಿಕ ಅರ್ಹತೆ:
BMRCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿ, MSW, MA, MBA ಪೂರ್ಣಗೊಳಿಸಿರಬೇಕು .
ಗರಿಷ್ಠ ವಯಸ್ಸಿನ ಮಿತಿ:
ಪ್ರಧಾನ ವ್ಯವಸ್ಥಾಪಕ ಹುದ್ದೆಗೆ – 55
ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ – 48
ವೇತನ ವಿವರ:
ಪ್ರಧಾನ ವ್ಯವಸ್ಥಾಪಕರು – ₹2,06,250/-
ಉಪ ಪ್ರಧಾನ ವ್ಯವಸ್ಥಾಪಕರು – ₹1,64,000/-
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.