BMRCL Hall Ticket 2024: ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿರುವ ಸ್ಟೇಷನ್ ಕಂಟ್ರೋಲರ್ ಟ್ರೈನ್ ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಸದರಿ ಹುದ್ದೆಗಳ ಪರೀಕ್ಷೆಗಳಿಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ಮೆಟ್ರೋ ನೇಮಕಾತಿಯಲ್ಲಿ ಒಟ್ಟು 69 ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದ್ದು, ಆಗಸ್ಟ್ 12, 2024 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ 100 ಪ್ರಶ್ನೆಗಳು ಒಳಗೊಂಡಂತೆ ಪ್ರತಿ ಪ್ರಶ್ನೆಗೂ 1 ಅಂಕಗಳನ್ನು ನಿಗದಿಪಡಿಸಲಾಗಿದ್ದು, ಬಹು ಆಯ್ಕೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪ್ರಶ್ನೆ ಪತ್ರಿಕೆಯು ದ್ವಿಭಾಷೆ ಅಂದರೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಇರುತ್ತದೆ. ಸಾಮಾನ್ಯ ಜ್ಞಾನ, ಎಲೆಕ್ಟ್ರಾನಿಕ್ಸ್, ಕಮ್ಯುನಿಕೇಷನ್, ಮೆಕಾನಿಕಲ್ ವಿಭಾಗದ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಅಧಿಕೃತ ವೆಬ್ ಸೈಟ್ https://english.bmrc.co.in/career/ ಮೂಲಕ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದಾಗಿದೆ. ಪ್ರವೇಶ ಪತ್ರದಲ್ಲಿ ಪರೀಕ್ಷಾ ಸಮಯ ಮತ್ತು ಪರೀಕ್ಷಾ ಕೇಂದ್ರಗಳ ಬಗೆಗಿನ ಮಾಹಿತಿಯನ್ನು ನೀಡಲಾಗಿದ್ದು, ಇದರ ಜೊತೆಗೆ ಪರೀಕ್ಷೆಯ ಸಮಯದಲ್ಲಿ ಅಭ್ಯರ್ಥಿಗಳು ಅನುಸರಿಸಬೇಕಾದ ಸಲಹೆ ಸೂಚನೆಗಳನ್ನು ನೀಡಲಾಗಿರುತ್ತದೆ. ಈ ಲೇಖನದಲ್ಲಿ ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದೆ.
How to Download BMRCL AC/TO Hall Ticket 2024
ಆನ್ ಲೈನ್ ಮೂಲಕ Admit Card ಡೌನ್ಲೋಡ್ ಮಾಡುವುದು ಹೇಗೆ..?
- ಮೊದಲಿಗೆ ಅಧಿಕೃತ ವೆಬ್ ಸೈಟಿಗೆ https://english.bmrc.co.in/career/ ಭೇಟಿ ನೀಡಿ.
- ನಂತರ ಮುಖಪುಟದಲ್ಲಿ ಕಾಣುವ ‘Click here to download test hall ticket” ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಮತ್ತೊಂದು ಪುಟವು ತೆರೆದುಕೊಳ್ಳುತ್ತದೆ, ಅಲ್ಲಿ ನೇಮಕಾತಿಯ ಸಂಖ್ಯೆಯನ್ನು ನಮೂದಿಸಿ.
- ನಂತರ ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
- ಕೊನೆಯದಾಗಿ ‘ಡೌನ್ಲೋಡ್ ಹಾಲ್ ಟಿಕೆಟ್’ ಕ್ಲಿಕ್ ಮಾಡಿ.
- PDF ರೂಪದಲ್ಲಿ ನಿಮ್ಮ ಮೊಬೈಲ್ ಪರದೆ ಮೇಲೆ ಹಾಲ್ ಟಿಕೆಟ್ ತೆರೆದುಕೊಳ್ಳುತ್ತದೆ ಅದನ್ನು ಪ್ರಿಂಟ್ ಮಾಡಿ.
Important Direct Links:
BMRCL AC/TO Hall Ticket 2024 Download Link | Click Here |
BMRCL AC/TO Exam Date Notice PDF | Download |
BMRCL Train Operator Notification 2024 | Details |
More Updates | KarnatakaHelp.in |