BMRCL General Manager Recruitment 2025: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ 07 ಪ್ರಧಾನ ವ್ಯವಸ್ಥಾಪಕ ಮತ್ತು ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗಳಿಗೆ ಹೊರಗುತ್ತಿಗೆ/ನಿಯೋಜನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಅವಧಿ ವಿಸ್ತರಣೆಗೂ ಅವಕಾಶಗಳಿವೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು BMRCL ಅಧಿಕೃತ ವೆಬ್ ಸೈಟ್ https://english.bmrc.co.in/career/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ,ಪ್ರಮುಖ ದಿನಾಂಕಗಳು, ಪ್ರಮುಖ ದಿನಾಂಕಗಳು, ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Highlights of Employment News
Organization Name – Bangalore Metro Rail Corporation Limited Post Name – General Manager and Dy. General Managers Total Vacancy – 07 Apply Mode – Online Job Location – Bengaluru
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 06-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-06-2025 • ಪೂರಕ ದಾಖಲೆಗಳೊಂದಿಗೆ ಪ್ರತಿಯನ್ನು ಮುದ್ರಿಸಲು ಕೊನೆಯ ದಿನಾಂಕ – 07-07-2025
ಹುದ್ದೆಗಳ ವಿವರ:
ಪ್ರಧಾನ ವ್ಯವಸ್ಥಾಪಕರು (ಟ್ರ್ಯಾಕ್ಷನ್/ರೋಲಿಂಗ್ ಸ್ಟಾಕ್) – 01
ಉಪ ಪ್ರಧಾನ ವ್ಯವಸ್ಥಾಪಕ (ಟ್ರ್ಯಾಕ್ಷನ್/ರೋಲಿಂಗ್ ಸ್ಟಾಕ್) – 01
ಉಪ ಪ್ರಧಾನ ವ್ಯವಸ್ಥಾಪಕ (ಎಲೆಕ್ಟಿಕಲ್ ಮತ್ತು ಮೆಕ್ಯಾನಿಕಲ್) – 01
ಉಪ ಪ್ರಧಾನ ವ್ಯವಸ್ಥಾಪಕ (ಆಪರೇಷನ್) -01
ಉಪ ಪ್ರಧಾನ ವ್ಯವಸ್ಥಾಪಕ (ಸುರಕ್ಷತೆ) – 01
ಉಪ ಪ್ರಧಾನ ವ್ಯವಸ್ಥಾಪಕ (ಎಸ್‌ಎಸ್‌ಎಂ) – 01
ಉಪ ಪ್ರಧಾನ ವ್ಯವಸ್ಥಾಪಕ (ಎಎಫ್‌ಸಿ/ಟೆಲಿ) – 01
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ
ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ / ಮೆಕ್ಯಾನಿಕಲ್/ ಸಿವಿಲ್/ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್/ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಎಂಜಿನಿಯರಿಂಗ್ ಪದವಿ.
ಸುರಕ್ಷತಾ ನಿರ್ವಹಣೆಯಲ್ಲಿ ಡಿಪ್ಲೊಮಾ ಜೊತೆಗೆ ಎಂಜಿನಿಯರಿಂಗ್ ಪದವಿ ಪಡೆದಿರಬೇಕು.
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರಿಜ್ಞಾನ ಕಡ್ಡಾಯ.
ವಯೋಮಿತಿ:
ದಿನಾಂಕ 06-06-2025 ರಂತೆ ಜನರಲ್ ಮ್ಯಾನೇಜರ್ ಹುದ್ದೆಗೆ 55 ರಿಂದ 58 ವರ್ಷಗಳು
ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ – 48 ರಿಂದ 56 ವರ್ಷಗಳು
ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಸಂದರ್ಶನ ಮತ್ತು ದಾಖಲೆ ಪರಿಶೀಲನೆ.
ವೇತನ:
ಜನರಲ್ ಮ್ಯಾನೇಜರ್ ಹುದ್ದೆಗೆ – 2,06,250ರೂ.
ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ 1,64,000ರೂ.
ಬಿಎಂಆರ್‌ಸಿಎಲ್ ನಿಯಮಗಳ ಪ್ರಕಾರ ಇತರೆ ಸವಲತ್ತುಗಳು ದೊರೆಯುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಉಲ್ಲೇಖಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
BMRCL ಅಧಿಕೃತ ವೆಬ್ ಸೈಟ್ https://english.bmrc.co.in/career/ ಗೆ ಭೇಟಿ ನೀಡಿ.
1) BMRCL/HR/0009/0&M/2025 / 06.06.2025/ ಜನರಲ್ ಮ್ಯಾನೇಜರ್ ಮತ್ತು ಡಿಪೈ ಜನರಲ್ ಮ್ಯಾನೇಜರ್‌ಗಳು ವಿಭಾಗದ ಕೆಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಲಿಂಕ್ ಮೇಲೆ ಟ್ಯಾಪ್ ಮಾಡಿ.
ಅಧಿಸೂಚನೆ ಸಂಖ್ಯೆ ಹಾಗೂ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ- ವಿವರ ಹಾಗೂ ಅಗತ್ಯ ಶೈಕ್ಷಣಿಕದ ದಾಖಲಾತಿಗಳನ್ನು ಅಪ್ಲೋಡ್ ಮಾಡಿ. • ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಸಲ್ಲಿಸಿದ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ಜನರಲ್ ಮ್ಯಾನೇಜರ್ (HR) ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ ಶಾಂತಿನಗರ, ಬೆಂಗಳೂರು – 560027 ಇವರಿಗೆ ಜುಲೈ 7ರ ಒಳಗೆ ಕಳುಹಿಸಬೇಕು.
ಲಕೋಟೆಯ ಮೇಲೆ ಪ್ರಧಾನ ವ್ಯವಸ್ಥಾಪಕ/ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಎಂದು ಬರೆಯಿರಿ. ಹೆಚ್ಚಿನ ಮಾಹಿತಿಗಾಗಿ
ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಇಮೇಲ್ ಐಡಿ helpdesk@bmrc.co.in ಅನ್ನು ಸಂಪರ್ಕಿಸಿ. (ಇಮೇಲ್‌ನಲ್ಲಿ ನಿಮ್ಮ ಸಂಪರ್ಕ ಸಂಖ್ಯೆಯನ್ನು ನಮೂದಿಸಿ)