ಬಿ.ಎಂ.ಆರ್.ಸಿ.ಎಲ್ನ ಸಿಸ್ಟಮ್ ವಿಭಾಗದಲ್ಲಿ ಮುಖ್ಯ ಇಂಜಿನಿಯರ್, ಡೆಪ್ಯೂಟಿ ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಅರ್ಜಿ ಸಲ್ಲಿಕೆ ಡಿ.1ರಿಂದ ಪ್ರಾರಂಭವಾಗಿದೆ. ಒಟ್ಟು 27 ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಗುತ್ತಿಗೆ ಮತ್ತು ನಿಯೋಜನೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತೆಯನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.24ರೊಳಗೆ BMRCL ಅಧಿಕೃತ ವೆಬ್ಸೈಟ್ https://english.bmrc.co.in/career/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿಯ ಸಹಿ ಮಾಡಿದ ಮುದ್ರಣವನ್ನು ಸ್ವೀಕರಿಸಲು ಕೊನೆಯ ದಿನಾಂಕ – ಡಿಸೆಂಬರ್ 30, 2025
ಹುದ್ದೆಗಳ ವಿವರ:
ಮುಖ್ಯ ಇಂಜಿನಿಯರ್ – 04 ಹುದ್ದೆಗಳು ಡೆಪ್ಯೂಟಿ ಮುಖ್ಯ ಇಂಜಿನಿಯರ್ – 06 ಹುದ್ದೆಗಳು ಕಾರ್ಯನಿರ್ವಾಹಕ ಇಂಜಿನಿಯರ್ – 05 ಹುದ್ದೆಗಳು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – 05 ಹುದ್ದೆಗಳು ಸಹಾಯಕ ಇಂಜಿನಿಯರ್ – 07 ಹುದ್ದೆಗಳು
ಒಟ್ಟು – 27 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಬಿ.ಎಂ.ಆರ್.ಸಿ.ಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಅಥವಾ ಬಿ.ಎಸ್ಸಿ ಪದವಿಯೊಂದಿಗೆ ಸಂಬಂಧಿತ ವಿಷಯದಲ್ಲಿ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
• ಕನ್ನಡ ಭಾಷೆಯ ಕುರಿತು ಜ್ಞಾನ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವಯಸ್ಸಿನ ಮಿತಿ:
• ಮುಖ್ಯ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 55-56 ವರ್ಷಗಳು • DY.ಮುಖ್ಯ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 48 ವರ್ಷಗಳು • ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 42 ವರ್ಷಗಳು • ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು • ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 36 ವರ್ಷಗಳು
ವಯೋಮಿತಿ ಸಡಿಲಿಕೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಸಂದರ್ಶನ ವೈದ್ಯಕೀಯ ಪರೀಕ್ಷೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 62,500ರೂ. ಗಳಿಂದ 2,06,250ರೂ. ವರೆಗೆ ವೇತನ ಹಾಗೂ ಕಂಪನಿಯ ನಿಯಮಗಳ ಪ್ರಕಾರ ಸಾರಿಗೆ ಮತ್ತು ಇತರೆ ಅನ್ವಯವಾಗುವ ಭತ್ಯೆಯನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
• BMRCL ವೃತ್ತಿಜೀವನದ ಅಧಿಕೃತ ವೆಬ್ಸೈಟ್ https://english.bmrc.co.in/career/ ಗೆ ಭೇಟಿ ನೀಡಿ.
• ಮುಖಪುಟದಲ್ಲಿ “1) Notification No. BMRCL/HR/0022/PRJ/2025/Chief Engineer,Dy.Chief Engineer,Executive Engineer,Assistant Executive Engineer,Assistant Engineer” ವಿಭಾಗದ ಕೆಳಗೆ ನೀಡಲಾಗಿರುವ “Click here to apply online” ಲಿಂಕ್ ಮೇಲೆ ಟ್ಯಾಪ್ ಮಾಡಿ.
Bmrcl Various Engineer Posts Online Form 2025
• ಬಳಿಕ ಅಧಿಸೂಚನೆ ಸಂಖ್ಯೆ ಹಾಗೂ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
• ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ, ಅರ್ಜಿಯಲ್ಲಿ ಕೇಳಲಾಗುವ ಸ್ವ- ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿಗಳು ಹಾಗೂ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
• ಬಳಿಕ ಸಲ್ಲಿಸಿದ ಅರ್ಜಿ ಪ್ರತಿಯೊಂದಿಗೆ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಜನನ ಪ್ರಮಾಣಪತ್ರದ ವಯಸ್ಸಿನ ಪುರಾವೆ ಪ್ರತಿ / 10 ನೇ ತರಗತಿ ಪ್ರಮಾಣಪತ್ರ, ಶೈಕ್ಷಣಿಕ ಅರ್ಹತೆಗಳು (10ನೇ ತರಗತಿಯಿಂದ ಕೊನೆಯ ಅರ್ಹತಾ ಪದವಿಯವರೆಗೆ), ಅನುಭವ ಪ್ರಮಾಣಪತ್ರಗಳು (ಪ್ರಸ್ತುತ ಮತ್ತು ಹಿಂದಿನ ಉದ್ಯೋಗಗಳು), ವಿವರವಾದ ರೆಸ್ಯೂಮ್/ಬಯೋಡೇಟಾ/ಸಿವಿ ಪ್ರತಿ ಹಾಗೂ ಯಾವುದೇ ಇತರ ಸಂಬಂಧಿತ ಪ್ರಮಾಣ ಪತ್ರಗಳನ್ನು ಲಗತ್ತಿಸಿ. ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಡಿಸೆಂಬರ್ 30ರೊಳಗೆ ತಲುಪುವಂತೆ ಕಳುಹಿಸಬೇಕು.
✓ ವಿಳಾಸ: ಜನರಲ್ ಮ್ಯಾನೇಜರ್ (HR),ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್. ರಸ್ತೆ,ಶಾಂತಿನಗರ, ಬೆಂಗಳೂರು 560027
• ಲಕೋಟೆಯ ಮೇಲೆ “ನೀವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ನಮೂದಿಸಿ. ______ __ಹುದ್ದೆಗೆ ಅರ್ಜಿ” ಎಂದು ಬರೆದಿರಬೇಕು.
ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ; BMRCL ಇಮೇಲ್ ಐಡಿhelpdesk@bmrc.co.in ಅನ್ನು ಸಂಪರ್ಕಿಸಿ.(ಇಮೇಲ್ನಲ್ಲಿ ನಿಮ್ಮ ಸಂಪರ್ಕ ಸಂಖ್ಯೆಯನ್ನು ನಮೂದಿಸಿ)