ಬೆಂಗಳೂರು ಮೆಟ್ರೋ ರೈಲು ನಿಗಮ(BMRCL)ದ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಜನರಲ್ ಮ್ಯಾನೇಜರ್(02) ಹಾಗೂ ಡೆಪ್ಯೂಟಿ ಜನರಲ್ ಮ್ಯಾನೇಜರ್(05) ಸೇರಿದಂತೆ ಒಟ್ಟು 07 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದ/ನಿಯೋಜನೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಬಿಎಂಆರ್ಸಿಎಲ್ನ ಅಧಿಕೃತ ವೆಬ್ಸೈಟ್ https://english.bmrc.co.in/career/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಡಿಸೆಂಬರ್ 20, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 15, 2026
- ಅರ್ಜಿಯ ಸಹಿ ಮಾಡಿದ ಮುದ್ರಣವನ್ನು ಸ್ವೀಕರಿಸಲು ಕೊನೆಯ ದಿನಾಂಕ – ಜನವರಿ 20, 2026
ಹುದ್ದೆಗಳ ವಿವರ:
ಜನರಲ್ ಮ್ಯಾನೇಜರ್ (Signalling/Telecom) – 01 ಹುದ್ದೆ
ಜನರಲ್ ಮ್ಯಾನೇಜರ್ (Operations) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (Safety) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (SSM) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (AFC/Tele) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (Stores) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (P-Way) – 01 ಹುದ್ದೆ
ಒಟ್ಟು – 07 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಬಿ.ಎಂ.ಆರ್.ಸಿ.ಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ (ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ/ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್ ) ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ:
• ಜನರಲ್ ಮ್ಯಾನೇಜರ್ ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು (ನಿಯೋಜನೆ ಆಧಾರ- 56 ವರ್ಷಗಳು) ವರ್ಷಗಳು
• ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 48 ವರ್ಷಗಳು (ನಿಯೋಜನೆ ಆಧಾರ- 56 ವರ್ಷಗಳು) ವರ್ಷಗಳು
ವಯೋಮಿತಿ ಸಡಿಲಿಕೆ; ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಮಾನದಂಡಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
ಸಂದರ್ಶನ
ವೈದ್ಯಕೀಯ ಪರೀಕ್ಷೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ – 2,06,250ರೂ. ಹಾಗೂ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ 1,64,000ರೂ. ವರೆಗೆ ವೇತನದ ಜೊತೆಗೆ ಕಂಪನಿಯ ನಿಯಮಗಳ ಪ್ರಕಾರ ಸಾರಿಗೆ ಮತ್ತು ಇತರೆ ಅನ್ವಯವಾಗುವ ಭತ್ಯೆಯನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
• BMRCL ವೃತ್ತಿಜೀವನದ ಅಧಿಕೃತ ವೆಬ್ಸೈಟ್ https://english.bmrc.co.in/career/ ಗೆ ಭೇಟಿ ನೀಡಿ.
• ಮುಖಪುಟದಲ್ಲಿ “Notification No.BMRCL/HR/0023/O&M/2025/General Manager (Signalling / Telecom), General Manager (Operations), Deputy General Manager (Safety),- ವಿಭಾಗದ ಕೆಳಗೆ ನೀಡಲಾಗಿರುವ “ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.
• ಬಳಿಕ ಅಧಿಸೂಚನೆ ಸಂಖ್ಯೆ ಹಾಗೂ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
• ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ, ಅರ್ಜಿಯಲ್ಲಿ ಕೇಳಲಾಗುವ ಸ್ವ- ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿಗಳು ಹಾಗೂ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
• ಬಳಿಕ ಸಲ್ಲಿಸಿದ ಅರ್ಜಿ ಪ್ರತಿಯೊಂದಿಗೆ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಜನನ ಪ್ರಮಾಣಪತ್ರದ ವಯಸ್ಸಿನ ಪುರಾವೆ ಪ್ರತಿ / 10 ನೇ ತರಗತಿ ಪ್ರಮಾಣಪತ್ರ, ಶೈಕ್ಷಣಿಕ ಅರ್ಹತೆಗಳು (10ನೇ ತರಗತಿಯಿಂದ ಕೊನೆಯ ಅರ್ಹತಾ ಪದವಿಯವರೆಗೆ), ಅನುಭವ ಪ್ರಮಾಣಪತ್ರಗಳು (ಪ್ರಸ್ತುತ ಮತ್ತು ಹಿಂದಿನ ಉದ್ಯೋಗಗಳು), ವಿವರವಾದ ರೆಸ್ಯೂಮ್/ಬಯೋಡೇಟಾ/ಸಿವಿ ಪ್ರತಿ ಹಾಗೂ ಯಾವುದೇ ಇತರ ಸಂಬಂಧಿತ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಜನವರಿ 20ರೊಳಗೆ ತಲುಪುವಂತೆ ಕಳುಹಿಸಬೇಕು.
✓ ವಿಳಾಸ: ಜನರಲ್ ಮ್ಯಾನೇಜರ್ (HR),ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್. ರಸ್ತೆ,ಶಾಂತಿನಗರ, ಬೆಂಗಳೂರು 560027
• ಲಕೋಟೆಯ ಮೇಲೆ “ನೀವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ನಮೂದಿಸಿ. ______ ಹುದ್ದೆಗೆ ಅರ್ಜಿ” ಎಂದು ಬರೆದಿರಬೇಕು.
ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ; BMRCL ಇಮೇಲ್ ಐಡಿhelpdesk@bmrc.co.in ಅನ್ನು ಸಂಪರ್ಕಿಸಿ.(ಇಮೇಲ್ನಲ್ಲಿ ನಿಮ್ಮ ಸಂಪರ್ಕ ಸಂಖ್ಯೆಯನ್ನು ನಮೂದಿಸಿ)
Important Direct Links:
| Official Notification PDF | Download |
| Online Application Form Link | Apply Now |
| Official Website | bmrc.co.in |
| More Updates | KarnatakaHelp.in |



