BMRCLನಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳು

ಅರ್ಜಿ ಸಲ್ಲಿಸಲು ಜ.15ರವರೆಗೆ ಅವಕಾಶ

Published on:

ಬೆಂಗಳೂರು ಮೆಟ್ರೋ ರೈಲು ನಿಗಮ(BMRCL)ದ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಜನರಲ್ ಮ್ಯಾನೇಜರ್(02) ಹಾಗೂ ಡೆಪ್ಯೂಟಿ ಜನರಲ್ ಮ್ಯಾನೇಜರ್(05) ಸೇರಿದಂತೆ ಒಟ್ಟು 07 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದ/ನಿಯೋಜನೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಬಿಎಂಆರ್‌ಸಿಎಲ್‌ನ ಅಧಿಕೃತ ವೆಬ್ಸೈಟ್ https://english.bmrc.co.in/career/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಡಿಸೆಂಬರ್ 20, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 15, 2026
  • ಅರ್ಜಿಯ ಸಹಿ ಮಾಡಿದ ಮುದ್ರಣವನ್ನು ಸ್ವೀಕರಿಸಲು ಕೊನೆಯ ದಿನಾಂಕ – ಜನವರಿ 20, 2026

ಹುದ್ದೆಗಳ ವಿವರ:

ಜನರಲ್ ಮ್ಯಾನೇಜರ್ (Signalling/Telecom) – 01 ಹುದ್ದೆ
ಜನರಲ್ ಮ್ಯಾನೇಜರ್ (Operations) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (Safety) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (SSM) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (AFC/Tele) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (Stores) – 01 ಹುದ್ದೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (P-Way) – 01 ಹುದ್ದೆ

ಒಟ್ಟು – 07 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಬಿ.ಎಂ.ಆರ್.ಸಿ.ಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ (ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ/ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್‌ ) ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:

• ಜನರಲ್ ಮ್ಯಾನೇಜರ್ ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು (ನಿಯೋಜನೆ ಆಧಾರ- 56 ವರ್ಷಗಳು) ವರ್ಷಗಳು
• ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 48 ವರ್ಷಗಳು (ನಿಯೋಜನೆ ಆಧಾರ- 56 ವರ್ಷಗಳು) ವರ್ಷಗಳು

ವಯೋಮಿತಿ ಸಡಿಲಿಕೆ; ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಮಾನದಂಡಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
ಸಂದರ್ಶನ
ವೈದ್ಯಕೀಯ ಪರೀಕ್ಷೆ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ – 2,06,250ರೂ. ಹಾಗೂ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ 1,64,000ರೂ. ವರೆಗೆ ವೇತನದ ಜೊತೆಗೆ ಕಂಪನಿಯ ನಿಯಮಗಳ ಪ್ರಕಾರ ಸಾರಿಗೆ ಮತ್ತು ಇತರೆ ಅನ್ವಯವಾಗುವ ಭತ್ಯೆಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:

• BMRCL ವೃತ್ತಿಜೀವನದ ಅಧಿಕೃತ ವೆಬ್ಸೈಟ್ https://english.bmrc.co.in/career/ ಗೆ ಭೇಟಿ ನೀಡಿ.

• ಮುಖಪುಟದಲ್ಲಿ “Notification No.BMRCL/HR/0023/O&M/2025/General Manager (Signalling / Telecom), General Manager (Operations), Deputy General Manager (Safety),- ವಿಭಾಗದ ಕೆಳಗೆ ನೀಡಲಾಗಿರುವ “ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.

• ಬಳಿಕ ಅಧಿಸೂಚನೆ ಸಂಖ್ಯೆ ಹಾಗೂ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.

• ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ, ಅರ್ಜಿಯಲ್ಲಿ ಕೇಳಲಾಗುವ ಸ್ವ- ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿಗಳು ಹಾಗೂ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

• ಬಳಿಕ ಸಲ್ಲಿಸಿದ ಅರ್ಜಿ ಪ್ರತಿಯೊಂದಿಗೆ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜನನ ಪ್ರಮಾಣಪತ್ರದ ವಯಸ್ಸಿನ ಪುರಾವೆ ಪ್ರತಿ / 10 ನೇ ತರಗತಿ ಪ್ರಮಾಣಪತ್ರ, ಶೈಕ್ಷಣಿಕ ಅರ್ಹತೆಗಳು (10ನೇ ತರಗತಿಯಿಂದ ಕೊನೆಯ ಅರ್ಹತಾ ಪದವಿಯವರೆಗೆ), ಅನುಭವ ಪ್ರಮಾಣಪತ್ರಗಳು (ಪ್ರಸ್ತುತ ಮತ್ತು ಹಿಂದಿನ ಉದ್ಯೋಗಗಳು), ವಿವರವಾದ ರೆಸ್ಯೂಮ್/ಬಯೋಡೇಟಾ/ಸಿವಿ ಪ್ರತಿ ಹಾಗೂ ಯಾವುದೇ ಇತರ ಸಂಬಂಧಿತ ಪ್ರಮಾಣ ಪತ್ರಗಳನ್ನು ಲಗತ್ತಿಸಿ.

ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಜನವರಿ 20ರೊಳಗೆ ತಲುಪುವಂತೆ ಕಳುಹಿಸಬೇಕು.

✓ ವಿಳಾಸ: ಜನರಲ್ ಮ್ಯಾನೇಜರ್ (HR),ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್. ರಸ್ತೆ,ಶಾಂತಿನಗರ, ಬೆಂಗಳೂರು 560027

• ಲಕೋಟೆಯ ಮೇಲೆ “ನೀವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ನಮೂದಿಸಿ. ______ ಹುದ್ದೆಗೆ ಅರ್ಜಿ” ಎಂದು ಬರೆದಿರಬೇಕು.

ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ; BMRCL ಇಮೇಲ್‌ ಐಡಿhelpdesk@bmrc.co.in ಅನ್ನು ಸಂಪರ್ಕಿಸಿ.(ಇಮೇಲ್‌ನಲ್ಲಿ ನಿಮ್ಮ ಸಂಪರ್ಕ ಸಂಖ್ಯೆಯನ್ನು ನಮೂದಿಸಿ)

Important Direct Links:

Official Notification PDFDownload
Online Application Form LinkApply Now
Official Websitebmrc.co.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment