ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ BMTC ಸಂಸ್ಥೆಯಲ್ಲಿನ ನಿರ್ವಾಹಕರು-ಉಳಿಕೆ ಮೂಲ ವೃಂದ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಅಂಕಪಟ್ಟಿ ವಿವರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಂಕಪಟ್ಟಿಯ ವಿವರಗಳನ್ನು ಆನ್ ಲೈನ್ ಮೂಲಕ ಪಡೆದುಕೊಳ್ಳಬಹುದಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ನಿರ್ವಾಹಕರ ಹುದ್ದೆಗೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಸೆಪ್ಟಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಈ ಪರೀಕ್ಷೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2 ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿ, ಸೆಪ್ಟೆಂಬರ್ 19, 2024 ರಂದು ಪ್ರಕಟಿಸಲಾಗಿತ್ತು, ಅದರಂತೆ ಈಗಾಗಲೇ ತಾತ್ಕಾಲಿಕ ಅಂಕ ಪಟ್ಟಿಯನ್ನು ಸೆಪ್ಟೆಂಬರ್ 13ರಂದು ಇಲಾಖೆಯು ಬಿಡುಗಡೆ ಮಾಡಿ, ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 18 ಸಂಜೆ 5.30 ರೊಳಗೆ ಪೂರಕ ದಾಖಲೆಗಳೊಂದಿಗೆ ಅಂಚೆ ಮೂಲಕ /ಖುದ್ದಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಸೆಪ್ಟೆಂಬರ್ 23 ರಂದು ಅಂತಿಮ ಅಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ.
BMA
Ed/KEA/ADMIN/CR-03-23-24(RPC)
Not for call msg