BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(BOB Capital Markets Careers)ಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬ್ಯಾಂಕ್ ಆಫ್ ಬರೋಡದ ಅಂಗ ಸಂಸ್ಥೆಯಾಗಿರುವ BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್‌ನಲ್ಲಿ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಒಟ್ಟು 70 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಇ-ಮೇಲ್ careers@bobcaps.in ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -31-05-2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಪದವಿ(Degree)/12ನೇ(PUC) ತರಗತಿ ತೇರ್ಗಡೆಯೊಂದಿಗೆ ಹಣಕಾಸು ಸೇವೆಗಳ ಮಾರಾಟ ಉತ್ಪನ್ನದಲ್ಲಿ 6 ತಿಂಗಳ ಅನುಭವ ಹೊಂದಿರಬೇಕು.
• ಡಿಮ್ಯಾಟ್ ಮತ್ತು ಟ್ರೇಡಿಂಗ್ ಖಾತೆ ತೆರೆಯುವಲ್ಲಿ ಮತ್ತು ಬ್ರೋಕಿಂಗ್ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಆದ್ಯತೆ ನೀಡಬೇಕು. ಹಾಗೂ ಇತರ ಕೌಶಲ್ಯಗಳನ್ನು ಹೊಂದಿರಬೇಕು.
ವಯೋಮಿತಿ:
ಉಲ್ಲೇಖಿಸಲಾಗಿಲ್ಲ
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿರುವುದಿಲ್ಲ
How to Apply for BOB Capital Markets Recruitment 2025
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು careers@bobcaps.in ಗೆ ಕಳುಹಿಸಬೇಕು.
ಇ-ಮೇಲ್‌ನ ವಿಷಯ ಸಾಲಿನಲ್ಲಿ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಎಂದು ಮುಖ್ಯವಾಗಿ ನಮೂದಿಸಿರಬೇಕು. ಬೇರೆ ಯಾವುದೇ ವಿಷಯದ ಕುರಿತು ಹೊಂದಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
Important Direct Links:
Official Notification PDF | Download |
Official Website | www.bobcaps.in |
More Updates | Karnataka Help.in |