ಒಟ್ಟು 2500 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ(BOB) ಅಧಿಸೂಚನೆ ಬಿಡುಗಡೆ ಮಾಡಿದೆ.
ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್ https://www.bankofbaroda.in/careerಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜುಲೈ 04, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 03, 2025 (ವಿಸ್ತರಿಸಲಾಗಿದೆ)
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ(Any Degree) ಪಡಿದಿರಬೇಕು.
ವಯೋಮಿತಿ:
01-07-2025 ರಂತೆ;
ಕನಿಷ್ಠ ಮಿತಿ – 21 ವರ್ಷಗಳು
ಗರಿಷ್ಠ ಮಿತಿ – 30 ವರ್ಷಗಳು
ಆಯ್ಕೆ ವಿಧಾನ:
ಆನ್‌ಲೈನ್ ಪರೀಕ್ಷೆ
ಮನೋಮಾಪನ ಪರೀಕ್ಷೆ (ವ್ಯಕ್ತಿತ್ವ ಮೌಲ್ಯಮಾಪನ)
ವೈಯಕ್ತಿಕ ಸಂದರ್ಶನ
ಅಂತಿಮ ಮೆರಿಟ್ ಪಟ್ಟಿ
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ – 850 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿ ಡಬ್ಲ್ಯೂ ಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – 175 ರೂ.
How to Apply for BOB LBO Recruitment 2025
ಅರ್ಜಿ ಸಲ್ಲಿಸುವ ವಿಧಾನ;
ಬ್ಯಾಂಕ್ ಆಫ್ ಬರೋಡ ಅಧಿಕೃತ ವೆಬ್ಸೈಟ್ https://www.bankofbaroda.in/career/current-opportunities ಗೆ ಭೇಟಿ ನೀಡಿ.
ಪ್ರಸ್ತುತ ಅವಕಾಶಗಳು ವಿಭಾಗದ ಕೆಳಗೆ ಬ್ಯಾಂಕ್ ಆಫ್ ಬರೋಡಾ BOB/HRM/REC/ADVT/2025/ನಲ್ಲಿ ನಿಯಮಿತ ಆಧಾರದ ಮೇಲೆ ಸ್ಥಳೀಯ ಬ್ಯಾಂಕ್ ಅಧಿಕಾರಿಗಳ (LBOs) ನೇಮಕಾತಿ ಈಗಲೇ ಅನ್ವಯಿಸುವ(Apply Now) ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ನೋಂದಾಯಿಸಿ.
ಅರ್ಜಿಯಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ, ಶೈಕ್ಷಣಿಕ ದಾಖಲೆ, ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡಿ.
ನಂತರ ಅರ್ಜಿ ಶುಲ್ಕ ಪಾವತಿ ಮಾಡಿ.
ಕೊನೆದಾಗಿ ಅರ್ಜಿಯನ್ನು ಪರೀಶೀಲನೆ ಮಾಡಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Bank Of Baroda LBO Vacancy 2025 Last Date Extended Notice PDF (Dated on 17/7/2025)
Yes
How much salary