ಬ್ಯಾಂಕ್ ಆಫ್ ಬರೋಡಾದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ವಿವಿಧ (ಡಿಜಿಟಲ್, MSME ಮತ್ತು ಅಪಾಯ ನಿರ್ವಹಣೆ) ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 330 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ಸೈಟ್https://www.bankofbaroda.in/career/current-opportunitiesಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ಹಾಗೂ ನಿಗದಿ ಅನುಭವ ಹೊಂದಿರಬೇಕು. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
01-07-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 22 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ಶಾರ್ಟ್ ಲಿಸ್ಟಿಂಗ್
ಸಂದರ್ಶನ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂ ಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 850 ರೂ.
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ, ESM ಹಾಗೂ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ – 175 ರೂ.
How to Apply for BOB SO Notification 2025 330 Vacancies
ಅರ್ಜಿ ಸಲ್ಲಿಸುವ ವಿಧಾನ
BOB ಅಧಿಕೃತ ವೆಬ್ಸೈಟ್ https://www.bankofbaroda.in/career/current-opportunitiesಗೆ ಭೇಟಿ ನೀಡಿ.
ಪ್ರಸ್ತುತ ಅವಕಾಶಗಳು ವಿಭಾಗದಲ್ಲಿ – ಪ್ರೊಫೈಲ್ – ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ವೃತ್ತಿಪರರ ನೇಮಕಾತಿ *ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ* ಲಿಂಕ್ ಮೇಲೆ ಕ್ಲಿಕ್ ಮಾಡಿ.
ನೀವು ಅರ್ಜಿ ಸಲ್ಲಿಸಬಯಸುವ ವಿಭಾಗವನ್ನು ಆಯ್ಕೆ ಮಾಡಿ.
ಅರ್ಜಿ ಸಲ್ಲಿಸಲು ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ನೋಂದಾಯಿಸಿ.
ಅರ್ಜಿಯಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ, ಶೈಕ್ಷಣಿಕ ದಾಖಲೆ, ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡಿ.
ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
ಕೊನೆದಾಗಿ ಅರ್ಜಿಯನ್ನು ಪರೀಶೀಲನೆ ಮಾಡಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
@2a