BPL Card Cancellation: ಅನರ್ಹ ʻBPLʼ ಕಾರ್ಡ್‌ ರದ್ದು; ಸಿಎಂ ಸಿದ್ದರಾಮಯ್ಯ ಸೂಚನೆ!

Follow Us:

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌(BPL Card Cancellation in Karnataka) ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.

Bpl Card Cancellation
Bpl Card Cancellation

ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ಹಾಗೂ ಸಿಇಓಗಳ ಜೊತೆಗಿನ ಸಭೆಯಲ್ಲಿ ಸಿಎಂ ಮಾತನಾಡಿ ರಾಜ್ಯದಲ್ಲಿ ಶೇ. 80 ಜನರು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ತಮಿಳುನಾಡಿನಲ್ಲಿ ಶೇ. 40ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ. 5.67 ಇರಬೇಕು. ಆದರೆ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಇದರ ಅರ್ಥವೇನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಸರ್ಕಾರದ ಸೇವೆಗಳನ್ನು ಜನರಿಗೆ ಒದಗಿಸಲು BPL ಕಾರ್ಡ್ ಅತಿ ಮುಖ್ಯವಾದ ದಾಖಲೆಯಾಗಿದ್ದು, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳು ಇವೆ. ಇದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ತೆಗೆದು ಹಾಕಬೇಕು ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಎಲ್ಲಾ ರೀತಿಯ ಯೋಜನೆಗಳನ್ನು ತಲುಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Important Direct Links:

More UpdatesKarnataka Help.in

Leave a Comment