‘ಬೋಕರೋ’ದಲ್ಲಿ ಸಹಾಯಕ ವ್ಯವಸ್ಥಾಪಕರ ನೇಮಕಾತಿ

ಬಿ.ಇ./ಬಿ.ಟೆಕ್ ಅರ್ಹತೆ

Published on:

ಕಲ್ಲಿದ್ದಲು ಆಧಾರಿತ ಶಾಖೋತ್ಪನ್ನ ವಿದ್ಯುತ್ ಸ್ಥಾವರವಾಗಿರುವ ಬೋಕರೋ ಪವರ್‌ ಸಪ್ಲೈ ಕಂಪನಿ ಲಿಮಿಟೆಡ್‌ನಲ್ಲಿ ಸಹಾಯಕ ವ್ಯವಸ್ಥಾಪಕರ (ಬಾಯ್ಲರ್ ಕಾರ್ಯಾಚರಣೆ ಎಂಜಿನಿಯರ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.05 ಕೊನೆದಿನವಾಗಿದೆ.

ಒಟ್ಟು 15 ಸ್ಥಾನಗಳಿಗೆ ಬಿ.ಇ./ಬಿ.ಟೆಕ್ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳು ಬಿಪಿಎಸ್‌ಸಿಎಲ್‌ ಅಧಿಕೃತ ಜಾಲತಾಣ https://bpscl.com/our_people/careers/ದ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ ಫೆಬ್ರವರಿ 09, 2026
  • ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಭರಿಸಲು ಕೊನೆಯ ದಿನಾಂಕ ಮಾರ್ಚ್ 05, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 65% ಅಂಕಗಳೊಂದಿಗೆ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಕೆಮಿಕಲ್/ಪವರ್ ಪ್ಲಾಂಟ್/ಪ್ರೊಡಕ್ಷನ್/ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಬಿ.ಇ./ಬಿ.ಟೆಕ್ ಪದವಿ ಪಡೆದಿರಬೇಕು ಹಾಗೂ ಕೇಂದ್ರ/ರಾಜ್ಯ ಬಾಯ್ಲರ್ ಮಂಡಳಿಯಿಂದ ನೀಡಲಾದ ಬಾಯ್ಲರ್ ಆಪರೇಷನ್ ಎಂಜಿನಿಯರ್ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ:

05-03-2026ರಂತೆ;

ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಇಲಾಖಾ ಅಭ್ಯರ್ಥಿಗಳಿಗೆ (ಬಿಪಿಎಸ್‌ಸಿಎಲ್ ಉದ್ಯೋಗಿಗಳಿಗೆ) 10-15 ವರ್ಷಗಳು.

ಆಯ್ಕೆ ವಿಧಾನ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
  • ಸಂದರ್ಶನ
  • ಮೆರಿಟ್ ಪಟ್ಟಿ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಪ್ರತಿ ತಿಂಗಳು ₹50,000-3%-1,60,000ವರೆಗೆ ವೇತನವನ್ನು ನೀಡಲಾಗುತ್ತದೆ ಹಾಗೂ 01 ವರ್ಷದ ಪ್ರೊಬೇಷನ್ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಅವರನ್ನು E-1 ದರ್ಜೆಯ ವೇತನ ಶ್ರೇಣಿ ₹60,000-3%-1,80,000ಕ್ಕೆ ಏರಿಸಲಾಗುವುದು.

ಅರ್ಜಿ ಶುಲ್ಕ:

ಒಬಿಸಿ, ಸಾಮಾನ್ಯ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 500ರೂ.
ಪ.ಜಾತಿ, ಪ.ಪಂಗಡ ಹಾಗೂ BPSCL ಇಲಾಖಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಸಲ್ಲಿಸುವ ಪ್ರಕ್ರಿಯೆ…

• BPSCL ಅಧಿಕೃತ ಜಾಲತಾಣ https://bpscl.com/our_people/careers/ಕ್ಕೆ ಭೇಟಿ ನೀಡಿ.

• “ಬಿಪಿಎಸ್‌ಸಿಎಲ್‌ನಲ್ಲಿ ಸಹಾಯಕ ವ್ಯವಸ್ಥಾಪಕ (ಬಾಯರ್ ಆಪರೇಷನ್‌ ಎಂಜಿನಿಯರ್), (ಗ್ರೇಡ್: ಇ-1) ಹುದ್ದೆಗೆ ನೇಮಕಾತಿ” ಶೀರ್ಷಿಕೆಯ ಕೆಳಗೆ ನೀಡಲಾಗಿರುವ *ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ* ಆಯ್ಕೆ ಮೇಲೆ ಟ್ಯಾಪ್ ಮಾಡಿ. (ಅಥವಾ ನೇರವಾಗಿ https://ibpsreg.ibps.in/bpscoct25/ಗೆ ಭೇಟಿ ನೀಡಿ.)

Bpscl Assistan Manager Notification 2026
Online Form

• ಬಳಿಕ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitebpscl.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “‘ಬೋಕರೋ’ದಲ್ಲಿ ಸಹಾಯಕ ವ್ಯವಸ್ಥಾಪಕರ ನೇಮಕಾತಿ”

Leave a Comment