Karnataka SSLC Result 2023 : ಎಲ್ಲಾ ಕರ್ನಾಟಕ ಹೆಲ್ಪ್ ಓದುಗರಿಗೆ ಸ್ವಾಗತ ಇಂದು ನಾವು SSLC ಫಲಿತಾಂಶದ ಬಗ್ಗೆ ಮಾಹಿತಿಯನ್ನು ತಿಳಿಸಲಿದ್ದೇವೆ ಆದ್ದರಿಂದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಳ್ಳಿರಿ.
ಎಸ್‌ಎಸ್ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸಲು ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಇಂದು (07-05-2023) ಫಲಿತಾಂಶ ದಿನಾಂಕ ಯಾವಾಗ ಎಂಬುದು ಕನ್ನರ್ಮ್ ಆಗುವ ಸಾಧ್ಯತೆ ಇದೆ. ಮಾಧ್ಯಮಗಳ ಜೊತೆ ಮಾತನಾಡಿದ ಕೆಎಸ್‌ಇಎಬಿ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪ, ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮೇ 8ರಂದು ಘೋಷಿಸುವ ಸಾಧ್ಯತೆ ಶೇ.90ರಷ್ಟಿದೆ. ಇಂದು ದಿನಾಂಕ ಘೋಷಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
ಮಾರ್ಚ್ 2023ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ: 31/03/2023 ರಿಂದ 15/04/2023ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/05/2023 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ದಿನಾಂಕ: 08/05/2023 ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.