2025ನೇ ಸಾಲಿಗೆ ಕ್ರೀಡಾ ಕೋಟಾ ಅಡಿಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್(GD) ಹುದ್ದೆಗಳ ನೇಮಕಾತಿಗಾಗಿ ಗಡಿ ಭದ್ರತಾ ಪಡೆ ಅಧಿಸೂಚನೆಯನ್ನು ಹೊರಡಿಸಿದೆ.
ಗಡಿ ಭದ್ರತಾ ಪಡೆ ಗೃಹ ವ್ಯವಹಾರಗಳ ಸಚಿವಾಲಯವು ಗಡಿ ಭದ್ರತಾ ಪಡೆಗಳಲ್ಲಿ ಕ್ರೀಡಾ ಕೋಟಾ-2025ರ ಅಡಿಯಲ್ಲಿ ಖಾಲಿ ಇರುವ (ಮಹಿಳಾ-113 ಹಾಗೂ ಪುರುಷ-128) ಒಟ್ಟು 241 ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಗ್ರೂಪ್ ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://www.bsf.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 25, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 20, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ(SSLC) ಉತ್ತೀರ್ಣರಾಗಿರಬೇಕು. ಅಥವಾ ಅದಕ್ಕೆ ಸಮಾನವಾದ ಪದವಿ ಹೊಂದಿರಬೇಕು. ಜೊತೆಗೆ ಕ್ರೀಡಾ ವಿಭಾಗದಲ್ಲಿ ಅರ್ಹತೆ.
ವಯೋಮಿತಿ:
01-08-2025 ರಂತೆ;
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 23 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ದಾಖಲೆ ಪರಿಶೀಲನೆ
ದೈಹಿಕ ಮಾನದಂಡಗಳ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 147ರೂ. 20 ಪೈಸೆ
ಪ.ಜಾತಿ, ಪ.ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
Super
hi Sir
Venkatesh s chavan
Veary grate job uv
BSF