ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದಡಿ ಬರುವ ಗಡಿ ಭದ್ರತಾ ಪಡೆ(BSF)ಯಲ್ಲಿ ಕ್ರೀಡಾ ಕೋಟಾದಡಿ 549 ಕಾನ್‌ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಹುದ್ದೆಗಳ ನೇಮಕಾತಿಗಾಗಿ ಬಿಎಸ್‌ಎಫ್ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ.
277 ಪುರುಷ ಸ್ಥಾನಗಳು ಹಾಗೂ 272 ಮಹಿಳಾ ಸ್ಥಾನಗಳಿಗೆ ನಿಗದಿತ ಕ್ರೀಡೆ/ಆಟಗಳ ವಿಭಾಗಗಳಲ್ಲಿ ಸಾಧನೆಗೈದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವವರು ಜನವರಿ 15 ರೊಳಗೆ BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 27, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 15, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜನವರಿ 15, 2026
ಶೈಕ್ಷಣಿಕ ಅರ್ಹತೆ:
• BSF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ (10 ನೇ ತರಗತಿ) ಅಥವಾ ಅದಕ್ಕೆ ಸಮಾನವಾದ ಅರ್ಹತೆಯನ್ನು ಹೊಂದಿರಬೇಕು.
• ನೇಮಕಾತಿಯ ಜಾಹೀರಾತಿನ ಮುಕ್ತಾಯ ದಿನಾಂಕದಿಂದ ಕಳೆದ ಎರಡು ವರ್ಷಗಳಲ್ಲಿ ಈ ಜಾಹೀರಾತಿನ ಪ್ಯಾರಾ 4(ಬಿ) ನಲ್ಲಿ ನೀಡಲಾದ ಸ್ಪರ್ಧೆಯ ಮಟ್ಟದಲ್ಲಿ ಭಾಗವಹಿಸಿದ ಅಥವಾ ಪದಕಗಳನ್ನು ಗೆದ್ದ ಆಟಗಾರರನ್ನು ಮಾತ್ರ ಪರಿಗಣಿಸಲಾಗುತ್ತದೆ.
ವಯೋಮಿತಿ:
01-08-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 23 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ, ಪ.ಪಂಗಡ ಹಾಗೂ ಮೂರು ವರ್ಷಗಳ ನಿರಂತರ ಸೇವೆ ಹೊಂದಿರುವ ಇಲಾಖಾ ಅಭ್ಯರ್ಥಿಗಳಿಗೆ – 05 ವರ್ಷಗಳು, ಓಬಿಸಿ (ಎನ್. ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷಗಳು.
ಆಯ್ಕೆ ವಿಧಾನ:
⭢ ದಾಖಲೆ ಪರಿಶೀಲನೆ
⭢ ದೈಹಿಕ ಗುಣಮಟ್ಟ ಪರೀಕ್ಷೆ (PST)
⭢ ಮೆರಿಟ್ ಲಿಸ್ಟ್
⭢ ವಿವರವಾದ ವೈದ್ಯಕೀಯ ಪರೀಕ್ಷೆ (DME)
⭢ ಅಭ್ಯರ್ಥಿಗಳ ಅಂತಿಮ ಅರ್ಹತೆಯ ಪಟ್ಟಿ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯನ 21,700ರೂ.ಗಳಿಂದ 69,100ರೂ.ವರೆಗೆ ವೇತನ, HRA,TA, DA ಮತ್ತು ಇನ್ನಿತರ ಭತ್ಯೆಗಳನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 159ರೂ.
ಪ.ಜಾತಿ, ಪ.ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
• ಮೊದಲಿಗೆ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://rectt.bsf.gov.in/ ಗೆ ಭೇಟಿ ನೀಡಿ.
• ನಂತರ ಪ್ರಸ್ತುತ ನೇಮಕಾತಿ ಹುದ್ದೆಗಳು ವಿಭಾಗದ ಕೆಳಗೆ ನೀಡಲಾಗಿರುವ ಕ್ರೀಡಾ “ಕೋಟಾದಡಿಯಲ್ಲಿ ಕಾನ್‌ಸ್ಟೇಬಲ್ (ಸಾಮಾನ್ಯ ಕರ್ತವ್ಯ) -2025” – ‘ಇಲ್ಲಿ ಅರ್ಜಿ ಸಲ್ಲಿಸಿ’ ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆ/ ಇ-ಮೇಲ್ ಐಡಿ ಹಾಗೂ ಓಟಿಪಿ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | https://bsf.gov.in/ |
| More Updates | KarnatakaHelp.in |
Laxmi Father name is Narsimha village of midagldinni district Raichur Karnataka india
Laxmi Father name is Narsimha village of midagldinni district Raichur Karnataka india