ಗಡಿ ಭದ್ರತಾ ಪಡೆ (BSF) ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ, ಅಪ್ಲೈ ಮಾಡಿ!
ಪ್ರಸ್ತುತ ನೇಮಕಾತಿಯು ಸಾವಿರಾರು ಹುದ್ದೆಗಳನ್ನು ಹೊಂದಿದ್ದು, ಅರ್ಜಿ ಸಲ್ಲಿಕೆ ಅರ್ಹತಾಮಾನದಂಡಗಳೇನು, ಅರ್ಜಿ ಸಲ್ಲಿಕೆ ಹೇಗೆ?, ಪ್ರಮುಖ ದಿನಾಂಕಗಳು ಯಾವವು ಸಂಪೂರ್ಣ ಮಾಹಿತಿ ಇಲ್ಲಿದೆ.
ಗಡಿ ಭದ್ರತಾ ಪಡೆ ಕಾನ್ಸ್‌ಟೇಬಲ್ ಪರೀಕ್ಷೆ 2024-25ರ ಮೂಲಕ ಖಾಲಿ ಇರುವ ಕಾನ್ಸ್ಟೇಬಲ್(ಟ್ರೇಡ್ಸ್ಮೆನ್) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಗಡಿ ಭದ್ರತಾ ಪಡೆಗಳ ಸಾಮಾನ್ಯ ನಿರ್ದೇಶನಾಲಯ (ಸಿಬ್ಬಂದಿ ನಿರ್ದೇಶನಾಲಯ:ನೇಮಕಾತಿ ವಿಭಾಗ)ವು ಅಧಿಸೂಚನೆ(BSF Constable Tradesman Notification 2025)ಯನ್ನು ಹೊರಡಿಸಿದೆ.
ಬಿಎಸ್ಎಫ್ ಕಾನ್ಸ್ಟೇಬಲ್ (ಟ್ರೇಡ್ಸ್ ಮೆನ್) ನೇಮಕಾತಿ 2025 – ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ (ಮಹಿಳಾ-182 ಹಾಗೂ ಪುರುಷ-3406) ಒಟ್ಟು 3588 ಕಾನ್ಸ್ಟೇಬಲ್ (ಟ್ರೇಡ್ಸ್ ಮೆನ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://www.bsf.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 25, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 24, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಸಂಬಂಧಿತ ಕ್ಷೇತ್ರದಲ್ಲಿ ಐಟಿಐ, ಪ್ರಮಾಣಪತ್ರ ಅಥವಾ ಪ್ರಾವೀಣ್ಯತೆಯನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಪ್ಪದೆ ಸಂಪೂರ್ಣ ಅಧಿಸೂಚನೆಯನ್ನು ಓದಬೇಕು.
ವಯೋಮಿತಿ:
24-08-2025 ರಂತೆ;
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 25 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ಹಂತ 1– PET ಮತ್ತು PST ಪರೀಕ್ಷೆ
ಹಂತ 2– ಲಿಖಿತ ಪರೀಕ್ಷೆ
ಹಂತ 3 – ವ್ಯಾಪಾರ / ಕೌಶಲ್ಯ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ, ಪ.ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for BSF Constable Tradesman Recruitment 2025
ಅರ್ಜಿ ಸಲ್ಲಿಸುವ ವಿಧಾನ;
BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ.
ನೋಂದಾಯಿತ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಬಿಎಸ್ಎಫ್ ಕಾನ್ಸ್ಟೇಬಲ್ (ಟ್ರೇಡ್ಸ್ ಮೆನ್) ನೇಮಕಾತಿ 2025 ಅರ್ಜಿ ನಮೂನೆ ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Bsf
Bsf constable