ಗಡಿ ಭದ್ರತಾ ಪಡೆಯು 2025ನೇ ಸಾಲಿಗೆ ಖಾಲಿ ಇರುವ ಗ್ರೂಪ್-ಸಿ ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್ ಮತ್ತು ರೇಡಿಯೋ ಮೆಕ್ಯಾನಿಕ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ನಿರ್ದೇಶನಾಲಯ ಸಾಮಾನ್ಯ ಗಡಿ ಭದ್ರತಾ ಪಡೆಯ ಸಂವಹನ ವ್ಯವಸ್ಥೆಯಲ್ಲಿ ಒಟ್ಟು 1,121 ಹೆಡ್ ಕಾನ್ಸ್ಟೆಬಲ್ (RO RM) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 23, 2025
ಶೈಕ್ಷಣಿಕ ಅರ್ಹತೆ:
ಹೆಡ್ ಕಾನ್ಸ್ಟೆಬಲ್ (ರೇಡಿಯೋ ಆಪರೇಟರ್/ರೇಡಿಯೋ ಮೆಕ್ಯಾನಿಕ್)ಹುದ್ದೆಗಳಿಗೆ–
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ 60% ಅಂಕಗಳೊಂದಿಗೆ 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ 10ನೇ ಉತ್ತೀರ್ಣದ ಜೊತೆಗೆ ರೇಡಿಯೋ ಮತ್ತು ಟೆಲಿವಿಷನ್/ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ/ಡೇಟಾ ತಯಾರಿ ಇತ್ಯಾದಿ ವಿಷಯಗಳಲ್ಲಿ 2 ವರ್ಷಗಳ ಐಟಿಐ ಪದವಿ ಪಡೆದಿರಬೇಕು.
ವಯೋಮಿತಿ:
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 30 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಮಿತಿ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ಹಂತ 1→ PST ಮತ್ತು PET ಪರೀಕ್ಷೆ ಹಂತ 2→ ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT) ಹಂತ 3→ ಡಿಕ್ಟೇಷನ್ ಪರೀಕ್ಷೆ ಮತ್ತು ಪ್ಯಾರಾಗ್ರಾಫ್ ಓದುವಿಕೆ ಪರೀಕ್ಷೆ (HC RO ಹುದ್ದೆಗೆ ಮಾತ್ರ), ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,500-81,100ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 100ರೂ.
ಪ.ಜಾತಿ, ಪ.ಪಂಗಡ, ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply for BSF HC RO RM Vacancy 2025
ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತೆ;
BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ.
ನೋಂದಾಯಿತ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಆಗಸ್ಟ್ 24ರಂದು ಸಕ್ರಿಯವಾಗುವ “ಬಿಎಸ್ಎಫ್ ಸಂವಹನ ವ್ಯವಸ್ಥೆಯಲ್ಲಿ ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್ ಮತ್ತು ರೇಡಿಯೋ ಮೆಕ್ಯಾನಿಕ್) ಹುದ್ದೆ ನೇಮಕಾತಿ 2025” – ಅರ್ಜಿ ನಮೂನೆ ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
12 puc pass
Hlo
It is very helpful