ನವದೆಹಲಿ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(ಬಿ.ಎಸ್.ಎನ್.ಎಲ್)ನಲ್ಲಿ ಜೂನಿಯರ್ ಟೆಲಿಕಾಂ ಅಧಿಕಾರಿ(ಟೆಲಿಕಾಂ) ಕೇಡರ್‌ನ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.04ರಿಂದ ಪ್ರಾರಂಭವಾಗಲಿದೆ.
ಸುಮಾರು 100 ಸ್ಥಾನಗಳಿಗೆ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಜು.03ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಲು ಬಿಎಸ್‌ಎನ್‌ಎಲ್‌ನ ಅಧಿಕೃತ ಜಾಲತಾಣ https://externalexam.bsnl.co.in/ಕ್ಕೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜೂನ್ 04, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 03, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜುಲೈ 03, 2026
ಹುದ್ದೆಗಳ ವಿವರ:
ಅಂಡಮಾನ್ ನಿಕೋಬಾರ್ – 01
ಆಂಧ್ರ ಪ್ರದೇಶ – 01
ಅಸ್ಸಾಂ – 02
ಕೋಲ್ಕತ್ತಾ TD – 02
ಚೆನ್ನೈ TD – 05
ಛತ್ತಿಸ್ಗಢ – 01
ಗುಜರಾತ್ – 03
ಹರಿಯಾಣ – 01
ಜಮ್ಮು ಮತ್ತು ಕಾಶ್ಮೀರ – 01
ಕರ್ನಾಟಕ – 26
ಕೇರಳ – 15
ಮಧ್ಯ ಪ್ರದೇಶ – 10
ಮಹಾರಾಷ್ಟ್ರ – 16
NE-II – 03
ಒಡಿಶಾ – 06
ರಾಜಸ್ಥಾನ್ – 01
ಸಿಕ್ಕಿಂ – 01
ತಮಿಳುನಾಡು – 01
ತೆಲಂಗಾಣ – 02
ಉತ್ತರಖಂಡ – 01
UPW – 01
ಒಟ್ಟು 100 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ (ಟೆಲಿಕಮ್ಯುನಿಕೇಷನ್ ಕಮ್ಯುನಿಕೇಶನ್ಸ್/ಎಲೆಕ್ಟ್ರಾನಿಕ್ಸ್/ರೇಡಿಯೋ/ಕಂಪ್ಯೂಟರ್/ಎಲೆಕ್ಟ್ರಿಕಲ್/ಇನ್ಫಾರ್ಮಶನ್ ಟೆಕ್ನಾಲಜಿ/ಇನ್ಸ್ಟ್ರುಮೆಂಟೇಶನ್) ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ ಅಥವಾ ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಬಿ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
03-07-2026;
ಕನಿಷ್ಠ ವಯಸ್ಸಿನ ಮಿತಿ 20 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ. ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10, ಪಿಡಬ್ಲ್ಯೂಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಡಿ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳು.
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ವೇತನ:
ಅಭ್ಯರ್ಥಿಗಳಿಗೆ ₹16,400-40,500/-ರವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹2,000
ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ₹1,000
ಅರ್ಜಿ ಸಲ್ಲಿಸುವ ವಿಧಾನ:
• BSNL ಅಧಿಕೃತ ಜಾಲತಾಣ https://externalexam.bsnl.co.in/ಕ್ಕೆ ಭೇಟಿ ನೀಡಿ.
• ನಂತರ ಜೂನ್ 04 ರಂದು ಸಕ್ರಿಯವಾಗುವ “BSNL ನಲ್ಲಿ ಟೆಲಿಕಾಂ ಸ್ಟ್ರೀಮ್ [JTO (T)(DR)]ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗೆ ನೇರ ನೇಮಕಾತಿ” ನೋಂದಣಿ ಲಿಂಕ್ ಆಯ್ಕೆ ಮಾಡಿ.
• ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
• ನಂತರ ಅರ್ಜಿಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿಗಳನ್ನು ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.
Important Direct Links:
| Official Notification PDF | Download |
| Online Application Form Link | Apply Now |
| Official Website | www.bsnl.co.in |
| More Updates | KarnatakaHelp.in |