BSNLನಲ್ಲಿ ಕಾರ್ಯನಿರ್ವಾಹಕ ತರಬೇತಿದಾರ(SET)ರ ನೇರ ನೇಮಕಾತಿ

ಅರ್ಜಿ ಸಲ್ಲಿಸಲು ಮಾ.31 ಕೊನೆದಿನ

Published on:

Updated On:

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(BSNL)ನಲ್ಲಿ 120 ಹಿರಿಯ ಕಾರ್ಯನಿರ್ವಾಹಕ ತರಬೇತಿದಾರರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಟೆಲಿಕಾಂ ಆಪರೇಷನ್ಸ್ ವಿಭಾಗಕ್ಕೆ 95 ಸ್ಥಾನಗಳು ಹಾಗೂ ಫೈನಾನ್ಸ್ ವಿಭಾಗಕ್ಕೆ 25 ಸ್ಥಾನಗಳು ಮೀಸಲಿದ್ದು, ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ, ಸಿಎ/ಸಿಎಂಎ ಓದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಉದ್ಯೋಗಾಕಾಂಕ್ಷಿಗಳು ಬಿಎಸ್‌ಎನ್‌ಎಲ್‌ ಅಧಿಕೃತ ಜಾಲತಾಣ https://externalexam.bsnl.co.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಕೆಯ ಕೊನೆ ದಿನಾಂಕವನ್ನು ಮಾ.31ರವರೆಗೆ ವಿಸ್ತರಿಸಲಾಗಿದೆ ಎಂದು ಬಿಎಸ್‌ಎನ್‌ಎಲ್‌ ನೇಮಕಾತಿ ಶಾಖೆ ಹೊರಡಿಸಿದ ಅಧಿಸೂಚನೆ ತಿಳಿಸಿದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಫೆಬ್ರವರಿ 05, 2026
  • ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮಾರ್ಚ್ 31, 2026(ವಿಸ್ತರಣೆ)

ಶೈಕ್ಷಣಿಕ ಅರ್ಹತೆ:

✓ ಹಿರಿಯ ಕಾರ್ಯನಿರ್ವಾಹಕ ತರಬೇತಿದಾರ (ಟೆಲಿಕಾಂ ಆಪರೇಷನ್ಸ್) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ (ಎಲೆಕ್ಟ್ರಾನಿಕ್ಸ್ & ಟೆಲಿ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮಶನ್ ಟೆಕ್ನಾಲಜಿ/ಎಲೆಕ್ಟ್ರಿಕಲ್/ ಇನ್ಸ್ಟ್ರುಮೆಂಟೇಶನ್) ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

✓ ಹಿರಿಯ ಕಾರ್ಯನಿರ್ವಾಹಕ ತರಬೇತಿದಾರ (ಫೈನಾನ್ಸ್) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್(CA)/ಕಾಸ್ಟ್ ಅಂಡ್ ಮ್ಯಾನೇಜ್ಮೆಂಟ್ ಅಕೌಂಟೆನ್ಸಿ(CMA) ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕನಿಷ್ಠ ಮಿತಿ – 21 ವರ್ಷಗಳು
ಗರಿಷ್ಠ ಮಿತಿ – 30 ವರ್ಷಗಳು

ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ. ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10-15 ವರ್ಷಗಳು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ವೇತನ

ಸದರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 24,900-50,500ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 2,500ರೂ.
ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 1,250ರೂ.

ಅರ್ಜಿ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು BSNL ಅಧಿಕೃತ ಜಾಲತಾಣ https://externalexam.bsnl.co.in/ಕ್ಕೆ ಭೇಟಿ ನೀಡಿ.

• ನಂತರ “ಬಿ.ಎಸ್.ಎನ್.ಎಲ್ ನಲ್ಲಿ ಬಾಹ್ಯ ಅಭ್ಯರ್ಥಿಗಳಿಂದ ಹಿರಿಯ ಕಾರ್ಯನಿರ್ವಾಹಕ ತರಬೇತಿದಾರರ (ದೂರಸಂಪರ್ಕ ಮತ್ತು ಹಣಕಾಸು) ನೇರ ನೇಮಕಾತಿ-2026(Registration Link)” ಅರ್ಜಿ ನಮೂನೆ ಕ್ಲಿಕ್‌ ಮಾಡಿ.

• ನಂತರ ಅರ್ಜಿಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿಗಳನ್ನು ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

BSNL SET 2026 Online Form Extension Notice (Dated 02/03/2026)Download
Official Notification PDFDownload
Online Application Form LinkApply Now
BSNL SET 2026 Syllabus PDFDownload
Official Websitebsnl.co.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “BSNLನಲ್ಲಿ ಕಾರ್ಯನಿರ್ವಾಹಕ ತರಬೇತಿದಾರ(SET)ರ ನೇರ ನೇಮಕಾತಿ”

Leave a Comment