Blood Donate: ಟ್ಯಾಟೂಗಳು ಇದ್ದರೆ ರಕ್ತದಾನ ಮಾಡಲು ಬಿಡುತ್ತಾರೆಯೇ?

ಹಚ್ಚೆ ಹಾಕಿಸಿಕೊಂಡಿದ್ದರೆ ರಕ್ತದಾನ ಮಾಡಬಹುದೇ?

By Mahima Bhat

Published On:

IST

ಫಾಲೋ ಮಾಡಿ

Can you Donate Blood if you have Tattoo

ಇಂದಿನ ಯುವ ಜನತೆ ಫ್ಯಾಷನ್ ಹೆಸರಿನಲ್ಲಿ ವಿವಿಧ ರೀತಿಯ ಹಚ್ಚೆಗಳನ್ನು ಅಥವಾ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಬೇಕಾದರೆ ವೈದ್ಯರು ಅಂತವರಿಗೆ ರಕ್ತದಾನ ಮಾಡಲು ಬಿಡುವುದಿಲ್ಲ ಎಂಬುದು ನಿಮಗೆ ತಿಳಿದಿದೆಯೇ? 

ಹಚ್ಚೆಗಳು ಅಥವಾ ಟ್ಯಾಟೂಗಳು ಇದ್ದರೆ ಅವರಿಗೆ ರಕ್ತದಾನ ಮಾಡುವುದು ಕೆಲವೊಮ್ಮೆ ಸಮಸ್ಯೆಯಾಗಬಹುದು. ಹಾಗಾದರೆ ದೇಹದ ಮೇಲೆ ಹಚ್ಚೆ ಇದ್ದರೆ ನೀವು ರಕ್ತವನ್ನು ಏಕೆ ನೀಡಬಾರದು? ಇದರಿಂದ ಆಗುವ ಸಮಸ್ಯೆ ಏನು? ಈ ಬಗ್ಗೆ ಇಲ್ಲಿದೆ ಮಾಹಿತಿ.

ದೇಹದ ಮೇಲೆ ಹಚ್ಚೆ ಇದ್ದರೆ ರಕ್ತದಾನ ಮಾಡಲು ಯಾವುದೇ ಅಡೆತಡೆಗಳಿಲ್ಲ ಎಂದು ವೈದ್ಯರು ಹೇಳುತ್ತಾರೆ. ಹಚ್ಚೆ ಹಾಕಿಸಿಕೊಂಡು ನೀವು ಸುಲಭವಾಗಿ ರಕ್ತದಾನ ಮಾಡಬಹುದು. ಇದು ರೋಗಿಗೆ ಯಾವುದೇ ಹಾನಿಯನ್ನುಂಟು ಮಾಡುವ ಸಾಧ್ಯತೆ ಇರುವುದಿಲ್ಲ. ಆದರೆ ಹಚ್ಚೆ ಹಾಕಿಸಿಕೊಂಡವರು ಕೆಲವು ಮಾರ್ಗಸೂಚಿಗಳನ್ನು ಅನುಸರಿಸುವುದು ಅವಶ್ಯಕವಾಗಿರುತ್ತದೆ. ಟ್ಯಾಟೂಗಳನ್ನು ಯಾವಾಗಲೂ ಹೊಸ ಸೂಜಿಗಳನ್ನು ಬಳಸಿಯೇ ಹಾಕಿಸಿಕೊಳ್ಳಬೇಕು. ಕೆಲವೊಮ್ಮೆ ಹೆಚ್ಚಿನ ಜನರು ಒಂದೇ ಸೂಜಿಗಳಿಂದ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಹಚ್ಚೆ ಹಾಕಿಸಿಕೊಂಡ ವ್ಯಕ್ತಿಗೆ ಇದು ಒಳ್ಳೆಯದಲ್ಲ. ಅಂತಹ ಸಂದರ್ಭದಲ್ಲಿ, ಮಾರಣಾಂತಿಕ ಕಾಯಿಲೆಗಳು ರಕ್ತದ ಮೂಲಕ ದೇಹವನ್ನು ಪ್ರವೇಶಿಸುತ್ತವೆ. ನಂತರ ಅದು ರೋಗಿಯ ದೇಹಕ್ಕೆ ಹರಡುತ್ತದೆ.

ಸೋಂಕಿನ ನಂತರ ವೈರಸ್ ಸಂತಾನೋತ್ಪತ್ತಿ ಮಾಡುವ ಅವಧಿಯನ್ನು ಇನ್ಕ್ಯುಬೇಷನ್ ಅವಧಿ ಎಂದು ಕರೆಯಲಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯು ಆರು ತಿಂಗಳೊಳಗೆ ಎಚ್‌ಐವಿ, ಹೆಪಟೈಟಿಸ್ ಬಿ ಅಥವಾ ಹೆಪಟೈಟಿಸ್ ಸಿ ವೈರಸ್ ಸೋಂಕಿಗೆ ಒಳಗಾಗಿದ್ದು ಆ ಸಮಯದಲ್ಲಿ ರಕ್ತ ಪರೀಕ್ಷೆಗೆ ಒಳಗಾಗಿದ್ದರೆ, ವರದಿ ನೆಗೆಟಿವ್ ಬರಬಹುದು. ಆದ್ದರಿಂದ ಹಚ್ಚೆ ಹಾಕಿಸಿಕೊಂಡ ಆರು ತಿಂಗಳೊಳಗೆ ರಕ್ತದಾನ ಮಾಡಬಾರದು. ಏಕೆಂದರೆ ಆರೋಗ್ಯವಂತ ವ್ಯಕ್ತಿಯು ರಕ್ತದ ಮೂಲಕ ಮಾರಣಾಂತಿಕ ಕಾಯಿಲೆಗೆ ತುತ್ತಾಗುವ ಅಪಾಯವಿರುತ್ತದೆ. ಆದ್ದರಿಂದ ಹಚ್ಚೆ ಹಾಕಿಸಿಕೊಳ್ಳುವ ಮೊದಲು ಕನಿಷ್ಠ ಆರು ತಿಂಗಳು ಜಾಗರೂಕರಾಗಿರಬೇಕು. ಆರು ತಿಂಗಳ ನಂತರ, ಸರಿಯಾಗಿ ಖಚಿತಪಡಿಸಿಕೊಳ್ಳಲು ರಕ್ತ ಪರೀಕ್ಷೆ ಮಾಡಬೇಕು. ಆಗ ನೀವು ಹಚ್ಚೆ ಹಾಕಿಸಿಕೊಂಡಿದ್ದರೂ ಸುರಕ್ಷಿತವಾಗಿ ರಕ್ತದಾನ ಮಾಡಬಹುದು. ಆದರೆ ಕೆಲವು ವಿಶೇಷ ಸಂದರ್ಭಗಳಲ್ಲಿ, ಕೆಲವು ವೈದ್ಯರು ಒಂದು ವರ್ಷದವರೆಗೆ ರಕ್ತದಾನ ಮಾಡುವುದನ್ನು ನಿಷೇಧಿಸುತ್ತಾರೆ.

ಮತ್ತಷ್ಟು ಸುದ್ದಿಗಳಿಗಾಗಿ KarnatakaHelp.inಗೆ ಭೇಟಿ ನೀಡಿ

About the Author

ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಪಡೆದು ನಂತರ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.‌ ಸದ್ಯ ಪಿಎಚ್.ಡಿ ಮಾಡುತ್ತಿದ್ದಾರೆ. 4 ವರ್ಷ ಪ್ರಿಲೈನ್ಸ್ ಕಂಟೆಂಟ್ ರೈಟರ್ ಆಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಯಕ್ಷಗಾನ, ನಾಟಕ, ಬರವಣಿಗೆ ಆಸಕ್ತಿ ವಿಷಯಗಳು.

Leave a Comment