ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ (Canara Bank) ಅಧಿಕೃತ ಅಧಿಸೂಚನೆಯ ಮೂಲಕ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಈ ಬ್ಯಾಂಕ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಮತ್ತು ದೇಶದ ತುಂಬಾ 9800 ಕ್ಕೂ ಹೆಚ್ಚಿನ ಬ್ರಾಂಚ್ ಗಳನ್ನು ಹೊಂದಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೃಹತ್ ಪ್ರಮಾಣದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಕರ್ನಾಟಕದಲ್ಲಿ 591 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಸಂಸ್ಥೆಯು ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ತನ್ನ ಅಪ್ರೆಂಟಿಶಿಪ್ ಪೋರ್ಟಲ್ https://nats.education.gov.in/ನಲ್ಲಿ ಮಾಹಿತಿ ಹಂಚಿಕೊಳ್ಳಲು ತಿಳಿಸಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 23, 2025
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 12, 2025
ಶೈಕ್ಷಣಿಕ ಅರ್ಹತೆ:
ಕೆನರಾ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೆನರಾ ಬ್ಯಾಂಕ್ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಸೆಪ್ಟೆಂಬರ್ 01, 2025 ಕ್ಕೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳ ಒಳಗಿರಬೇಕು.
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ತರಬೇತಿ ವೇತನ/ಶಿಷ್ಯವೇತನ:
ಕೆನರಾ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15000/- ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವು ಇರುವುದಿಲ್ಲ. ಇತರ ಎಲ್ಲಾ ಅಭ್ಯರ್ಥಿಗಳು ರೂ.500/- ನ್ನು ಆನ್ ಲೈನ್ ಮೂಲಕ ಪಾವತಿ ಮಾಡುವಂತೆ ತಿಳಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಮೊದಲನೆಯದಾಗಿ ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಅಪ್ರೆಂಟಿಸ್ ಪೋರ್ಟಲ್ https://nats.education.gov.in/ ನಲ್ಲಿ ನಿಮ್ಮ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ 100% ಮಾಹಿತಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ನಾಟ್ಸ್ ಪೋರ್ಟಲ್ ನಲ್ಲಿ ರಿಜಿಸ್ಟ್ರೇಷನ್ ಮಾಡಿಕೊಳ್ಳಲು Student –> General Student –> Student Registration ಆಯ್ಕೆಗಳ ಮೇಲೆ ಕ್ಲಿಕ್ ಮಾಡಿ.
ಐಡಿ ದಾಖಲೆ, ಇಮೇಲ್ ವಿಳಾಸ, ದೂರವಾಣಿ ಸಂಖ್ಯೆ, ಪಾಸ್ ಪೋರ್ಟ್ ಸೈಜ್ ಭಾವಚಿತ್ರ, ಆಧಾರ್ ಲಿಂಕ್ ಇರುವ ಬ್ಯಾಂಕ್ ಖಾತೆ, ಶೈಕ್ಷಣಿಕ ದಾಖಲೆಗಳ ಮಾಹಿತಿಯನ್ನು ನೀಡಿ ರೆಜಿಸ್ಟ್ರೇಷನ್ ಮಾಡಿಕೊಳ್ಳಿ.
Student Login ಆಯ್ಕೆ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ನೀವು ನೀಡಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರೀಕ್ಷಿಸಿಕೊಂಡು ನಿಮ್ಮ ದಾಖಲೆಗಳನ್ನು ಸಲ್ಲಿಸುವುದರೊಂದಿಗೆ ಎನ್ರೋಲ್ ಮೆಂಟ್ ಐಡಿಯನ್ನು ತೆಗೆದಿಟ್ಟುಕೊಳ್ಳಲು ಮರೆಯದಿರಿ.
ನಾಟ್ಸ್ ಪೋರ್ಟಲ್ ನಲ್ಲಿ ಪೂರ್ಣ ಮಾಹಿತಿ ಸಲ್ಲಿಸಿದ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಕೆಳಗೆ ನೀಡಿರುವ Apply Online Link ಲಿಂಕ್ ಮೇಲೆ ಕ್ಲಿಕ್ ಮಾಡಿ. Click here for New Registration ಮೇಲೆ ಕ್ಲಿಕ್ ಮಾಡಿ ನಂತರ ತೆರೆದುಕೊಳ್ಳುವ ಪರದೆಯಲ್ಲಿ ಕೇಳಲಾಗಿರುವ ಅಗತ್ಯ ಮಾಹಿತಿಗಳನ್ನು ಪೂರೈಸಿರಿ ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಕೆನರಾ ಬ್ಯಾಂಕ್ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಗೆ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯಿರಿ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.