ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಕೆನರಾ ಬ್ಯಾಂಕ್ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆ ಅಡಿಯಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ಗಳ ತರಬೇತಿಗಾಗಿ ಅಧಿಸೂಚನೆ ಹೊರಡಿಸಿದೆ.
ವಿವಿಧ ರಾಜ್ಯಗಳಲ್ಲಿರುವ ತನ್ನ ಶಾಖೆಗಳಲ್ಲಿ ಒಟ್ಟು 3500 ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನ ಆರಂಭಿಸಲಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು NATS ಅಧಿಕೃತ ಜಾಲತಾಣ https://nats.education.gov.in/ನಲ್ಲಿ ನೋಂದಣಿಯಾಗಿ, https://ibpsreg.ibps.in/canbaug25/ನ ಮೂಲಕ ಅ.12 ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 23, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 12, 2025
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ ಹೊಂದಿರಬೇಕು.
ವಯೋಮಿತಿ:
01-09-2025 ರಂತೆ;
ಕನಿಷ್ಠ ಮಿತಿ – 20 ವರ್ಷಗಳು
ಗರಿಷ್ಠ ಮಿತಿ – 28 ವರ್ಷಗಳು
ಅಭ್ಯರ್ಥಿಗಳು 01.09.1997 ಕ್ಕಿಂತ ಮೊದಲು ಮತ್ತು 01.09.2005 ಕ್ಕಿಂತ ನಂತರ ಜನಿಸಿರಬೇಕು (ಎರಡೂ ದಿನಗಳು ಸೇರಿದಂತೆ).
ವಯೋಮಿತಿ ಸಡಿಲಿಕೆ: ಪ.ಜಾತಿ, ಪ. ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷಗಳು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 3 ವರ್ಷಗಳು ಅಂಗವಿಕಲ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸ್ಥಳಿಯ ಭಾಷಾ ಪರೀಕ್ಷೆ
ಸಂದರ್ಶನ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸ್ಟೈಫಂಡ್:
ಕೆನರಾ ಬ್ಯಾಂಕ್ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000ರೂ.ವರೆಗೆ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ ಇತರ ಅಭ್ಯರ್ಥಿಗಳಿಗೆ – 500 ರೂ.
How to Apply for Canara Bank Graduate Apprentice Recruitment 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
• NATS ಅಧಿಕೃತ ಜಾಲತಾಣ https://nats.education.gov.in/ನಲ್ಲಿ ನೋಂದಣಿಯಾಗುವುದು ಕಡ್ಡಾಯ. ಅಪ್ರೆಂಟಿಸ್ಶಿಪ್ ಪೋರ್ಟಲ್ನಲ್ಲಿ 100% ಸಂಪೂರ್ಣ ಪ್ರೊಫೈಲ್ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
www.canarabank.bank.in → Careers → Recruitment → Engagement of Graduate Apprentices in Canara Bank under Apprentices Act, 1961 for FY 2025-26 ನ ಅಡಿಯಲ್ಲಿ ನೀಡಲಾಗಿರುವ “Click here to Apply Online[NEW]” ಮೇಲೆ ಕ್ಲಿಕ್ ಮಾಡಿ. ನಂತರ ಹೊಸ ನೋಂದಣಿ ಅಥವಾ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು.
Canara Bank Graduate Apprentice Online Form 2025-26