ಕೆನರಾ ಬ್ಯಾಂಕಿನ ಅಂಗಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ (CBSL) ಟ್ರೈನಿ(ಮಾರಾಟ ಮತ್ತು ಮಾರುಕಟ್ಟೆ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಕಲಬುರಗಿ, ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ಸೇರಿ ದೇಶದ ವಿವಿಧ ಕೇಂದ್ರಗಳಲ್ಲಿ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣ https://www.canmoney.in/careers ಕ್ಕೆ ಭೇಟಿ ನೀಡಿ. ಅ.06 ರೊಳಗೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 06, 2025 (ಸಂಜೆ 6ರವರೊಳಗೆ)
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಬೇಕು ಜೊತೆಗೆ ಕಂಪ್ಯೂಟರ್ ಬಳಕೆಯಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು.
ವಯೋಮಿತಿ:
31-08-2025 ರಂತೆ;
ಕನಿಷ್ಠ ಮಿತಿ – 20 ವರ್ಷಗಳು
ಗರಿಷ್ಠ ಮಿತಿ – 30 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಅರ್ಜಿಗಳ ಪರಿಶೀಲನೆ
ಸಂದರ್ಶನ(ಆನ್ಲೈನ್ ಅಥವಾ ಆಫ್ಲೈನ್)
ದಾಖಲೆ ಪರಿಶೀಲನೆ
ಸಂಬಳ:
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 22,000 ರೂ.ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
How to Apply for Canara Bank Securities Trainee Recruitment 2025
ಗಮನಿಸಿ: ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಫ್ಲೈನ್ ಮತ್ತು ಆನ್ಲೈನ್ ಮೂಲಕವೂ ಇರುವುದರಿಂದ ನಿಮಗೆ ಅನುಕೂಲಕ್ಕೆ ತಕ್ಕಂತೆ ಸೂಕ್ತ ವಿಧಾನ ಅನುಸರಿಸಿ.
Cbsl Career Page
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣ https://www.canmoney.in/careers ಕ್ಕೆ ಭೇಟಿ ನೀಡಿ.
“ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಬಳಿಕ ಸಲ್ಲಿಸಿದ ಅರ್ಜಿ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣ https://www.canmoney.in/careers ಕ್ಕೆ ಭೇಟಿ ನೀಡಿ.
• “ಭೌತಿಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಂಡು ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರಗಳನ್ನು ನಮೂದಿಸಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ. ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಅಕ್ಟೋಬರ್ 06 ರೊಳಗೆ ಸಲ್ಲಿಸಬೇಕು.
ವಿಳಾಸ: ಜನರಲ್ ಮ್ಯಾನೇಜರ್, ಮಾನವ ಸಂಪನ್ಮೂಲ ಇಲಾಖೆ, ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್, 7 ನೇ ಮಹಡಿ, ಮೇಕರ್ ಚೇಂಬರ್ III, ನಾರಿಮನ್ ಪಾಯಿಂಟ್, ಮುಂಬೈ – 400021
??
Ba
Cccc
I won’t a job please give me job