CBI Bank Apprentice Vacancy 2025: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರಸ್ತಕ ಸಾಲಿಗೆ ಸಂಬಂಧಿದಂತೆ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಭಾರತೀಯ ಸೆಂಟ್ರಲ್ ಬ್ಯಾಂಕ್ (CBI) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 4500 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ಶಿಷ್ಯವೃತ್ತಿ ತರಬೇತಿ ಯೋಜನೆ (NATS) ಅಧಿಕೃತ ವೆಬ್ ಸೈಟ್ https://nats.education.gov.in/student_type.php ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – Central Bank of India
Post Name – Apprentice
Total Vacancy – 4500
Apply Mode – Online
Job Location – All India(Karnataka)
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 07-06-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 23-06-225
ಶಿಕ್ಷಣ ಅರ್ಹತೆ:
ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ(Any Degree) ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪದವಿ ಸಮಾನ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
- ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಸ್ಟೈಫಂಡ್:
ಆಯ್ಕೆಯಾಗಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಗೆ ಮಾಸಿಕ 15,000ರೂ. ಸ್ಟೈಫಂಡ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸ್ಥಳೀಯ ಭಾಷಾ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
- ಅಂಗವಿಕಲ ಅಭ್ಯರ್ಥಿಗಳಿಗೆ – 400ರೂ. + ಜಿಎಸ್‌ಟಿ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇಡಬ್ಲ್ಯೂಎಸ್ ಹಾಗೂ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ – 600ರೂ. + ಜಿಎಸ್‌ಟಿ
- ಇತರೆ ಎಲ್ಲಾ ಅಭ್ಯರ್ಥಿಗಳಿಗೆ – 800ರೂ. + ಜಿಎಸ್‌ಟಿ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆಯನ್ನು ಓದಿ.
- ರಾಷ್ಟ್ರೀಯ ಶಿಷ್ಯವೃತ್ತಿ ತರಬೇತಿ ಯೋಜನೆ (NATS) ಅಧಿಕೃತ ವೆಬ್ ಸೈಟ್ https://nats.education.gov.in/student_type.phpಗೆ ಭೇಟಿ ನೀಡಿ.
- ವಿದ್ಯಾರ್ಥಿ ನೋಂದಣಿ ಅಥವಾ ವಿದ್ಯಾರ್ಥಿ ಲಾಗಿನ್ ಆಗಿ.
- ಜಾಹೀರಾತು ಮಾಡಲಾದ ಖಾಲಿ ಹುದ್ದೆಗಳ ವಿರುದ್ಧ ಅರ್ಜಿ ಸಲ್ಲಿಸಿ ಅಡಿಯಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಜಾಹಿರಾತನ್ನು ಹುಡುಕಿ
- ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ದಾಖಲಾತಿ ID ಯನ್ನು ಬರೆದಿಟ್ಟುಕೊಳ್ಳಿ.
- ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೆಚ್ಚಿನ ವಿವರ ಹಾಗೂ ಅರ್ಜಿ ಶುಲ್ಕ ಪಾವತಿ ಮಾಡಲು ಲಿಂಕ್ ಅನ್ನು BFSI SSC (info@bfsissc.com) ನಿಂದ ಇಮೇಲ್ ಅನ್ನು ಸ್ವೀಕರಿಸುತ್ತಾರೆ.
- ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Now |
Official Website | centralbankofindia.co.in |
More Updates | Karnataka Help.in |