ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲ್ಲೂಕಿ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿ ಶಿಬಿರ 2026ರ ಜ.05 ರಿಂದ 10 ದಿನಗಳ ಕಾಲ ಜರುಗಲಿದೆ. ಕನ್ನಡ ಓದಲು, ಬರೆಯಲು ತಿಳಿದಿರುವ ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 50 ವಯೋಮಾನದ ರಾಜ್ಯದ ಯಾವುದೇ ಜಿಲ್ಲೆಯವರು ಪಾಲ್ಗೊಳ್ಳಬಹುದು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡುದಾರರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಊಟ-ವಸತಿ ಸೌಕರ್ಯ ಕಲ್ಪಿಸಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.



