ಉಚಿತ ಊಟ-ವಸತಿ ಸಹಿತ ಅಣಬೆ ಬೇಸಾಯ ತರಬೇತಿ!

Published on:

ಬೆಂಗಳೂರು: ಹೊಸಕೋಟೆ ತಾಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆ.17ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18-50ರ ವಯೋಮಾನದ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ತರಬೇತಿ ಸಮಯದಲ್ಲಿ ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ.

ಆಸಕ್ತರು ನೇರ ಸಂದರ್ಶನಕ್ಕೆ ಹಾಜರಾಗಿ..

ಆಸಕ್ತಿಯುಳ್ಳ ಅಭ್ಯರ್ಥಿಗಳು ಆ.13ರ ಗುರುವಾರ ಬೆಳಗ್ಗೆ 10.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು.

ಸಂದರ್ಶನಕ್ಕೆ ಹಾಜರಾಗಲು ಆಗದಿದ್ದಲ್ಲಿ ಆ.13ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9886935603 ಗಳಿಗೆ ಸಂಪರ್ಕಿಸಿ, ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸೂಚಿಸಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ KarnatakaHelp.inಗೆ ಭೇಟಿ ನೀಡಿ.

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment