ದೇಶದಾದ್ಯಂತ 4500 ಶಾಖೆಗಳನ್ನು ಹೊಂದಿರುವ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(CBI) ವಿದೇಶಿ ವಿನಿಮಯ ಅಧಿಕಾರಿ(50) ಹಾಗೂ ಮಾರ್ಕೆಟಿಂಗ್ ಅಧಿಕಾರಿ(300) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಒಟ್ಟು 350 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದಿರುವವರು ಅರ್ಜಿ ಸಲ್ಲಿಕೆಗೆ ಅರ್ಹರು. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಫೆ.03 ರೊಳಗೆ IBPS ಅಧಿಕೃತ ವೆಬ್ ಸೈಟ್ ಲಿಂಕ್ https://ibpsreg.ibps.in/cbidec25/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆದಿನ – ಫೆಬ್ರವರಿ 03, 2026
ಶೈಕ್ಷಣಿಕ ಅರ್ಹತೆ:
✓ ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗೆ; ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಸಂಬಂಧಿತ ವಿಭಾಗದಲ್ಲಿ ವೃತ್ತಿಪರ ಅರ್ಹತೆ ಸಿಎಫ್ಎ/ಸಿಎ, ಎಂಬಿಎ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
✓ ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗೆ; ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ/MBA/PGDBA/PGDBM/PGPM/PGDM ಪೂರ್ಣಗೊಳಿಸಿರಬೇಕು.
*ಶೈಕ್ಷಣಿಕ ಅರ್ಹತೆಯ ಜೊತೆಗೆ ನಿಗದಿತ ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ:
01-01-2026ರಂತೆ;
✓ ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 25 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
✓ ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 22 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು