ದೇಶದಾದ್ಯಂತ 4500 ಶಾಖೆಗಳನ್ನು ಹೊಂದಿರುವ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(CBI) ವಿದೇಶಿ ವಿನಿಮಯ ಅಧಿಕಾರಿ(50) ಹಾಗೂ ಮಾರ್ಕೆಟಿಂಗ್ ಅಧಿಕಾರಿ(300) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಒಟ್ಟು 350 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದಿರುವವರು ಅರ್ಜಿ ಸಲ್ಲಿಕೆಗೆ ಅರ್ಹರು. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಫೆ.03 ರೊಳಗೆ IBPS ಅಧಿಕೃತ ವೆಬ್ ಸೈಟ್ ಲಿಂಕ್ https://ibpsreg.ibps.in/cbidec25/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜನವರಿ 20, 2026
- ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆದಿನ – ಫೆಬ್ರವರಿ 03, 2026
ಶೈಕ್ಷಣಿಕ ಅರ್ಹತೆ:
✓ ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗೆ; ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಸಂಬಂಧಿತ ವಿಭಾಗದಲ್ಲಿ ವೃತ್ತಿಪರ ಅರ್ಹತೆ ಸಿಎಫ್‌ಎ/ಸಿಎ, ಎಂಬಿಎ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
✓ ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗೆ; ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ/MBA/PGDBA/PGDBM/PGPM/PGDM ಪೂರ್ಣಗೊಳಿಸಿರಬೇಕು.
*ಶೈಕ್ಷಣಿಕ ಅರ್ಹತೆಯ ಜೊತೆಗೆ ನಿಗದಿತ ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ:
01-01-2026ರಂತೆ;
✓ ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
✓ ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 22 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ. ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು.
ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಪರೀಕ್ಷೆ
- ಸಂದರ್ಶನ
ಸಂಬಳ:
ವಿದೇಶಿ ವಿನಿಮಯ ಅಧಿಕಾರಿ (ಸ್ಕೇಲ್ III) ಹುದ್ದೆಗಳಿಗೆ – ₹85,920-1,05,280
ಮಾರ್ಕೆಟಿಂಗ್ ಅಧಿಕಾರಿ (ಸ್ಕೇಲ್ I) ಹುದ್ದೆಗಳಿಗೆ – ₹48,480-85,920
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ₹175
ಉಳಿದ ಎಲ್ಲಾ ಅಭ್ಯರ್ಥಿಗಳಿಗೂ – ₹850
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಅಭ್ಯರ್ಥಿಗಳು IBPS ಅಧಿಕೃತ ವೆಬ್ ಸೈಟ್ https://ibpsreg.ibps.in/cbidec25/ಗೆ ಭೇಟಿ ನೀಡಿ.
• ನಂತರ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ ನಮೂದಿಸಿ. ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಡೌನ್ಲೋಡ್ ಮಾಡಿ ಮುದ್ರಿಸಿ.
Important Direct Links:
| Official Notification PDF | Download |
| Online Application Form Link | Apply Now |
| Official Website | centralbank.bank.in |
| More Updates | KarnatakaHelp.in |