Vijayapur Chaitanya Mahila Sahakari Bank Notification 2026
ವಿಜಯಪುರ: ಜಿಲ್ಲೆಯ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ಲಿಮಿಟೆಡ್ನಲ್ಲಿ ಕಿರಿಯ ಸಹಾಯಕ ಮತ್ತು ಸಿಪಾಯಿ/ವಾಹನ ಚಾಲಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಂಡಿದೆ.
05 ಕಿರಿಯ ಸಹಾಯಕ ಹಾಗೂ 05 ಸಿಪಾಯಿ/ವಾಹನ ಚಾಲಕ ಸೇರಿದಂತೆ ಒಟ್ಟು 10 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಎಸ್ಸೆಸ್ಸೆಲ್ಸಿ, ಸಂಬಂಧಿತ ವಿಷಯದಲ್ಲಿ ಪದವಿ ಪಡೆದಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಬ್ಯಾಂಕಿನ ಅಧಿಕೃತ ಜಾಲತಾಣ(https://www.cmsbank.in/notifications/)ದಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ನಿಗದಿತ ದಾಖಲೆಗಳನ್ನು ಲಗತ್ತಿಸಿ, ‘ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ, ಮೀನಾಕ್ಷಿ ಚೌಕ, ಮಿರ್ದೆ ಗಲ್ಲಿ, ವಿಜಯಪುರ-586101’ಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತೆರೆಳಿ ಮಾ.06ರೊಳಗೆ ತಲುಪಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
✓ ಕಿರಿಯ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಧಿಕೃತ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ.70% ಅಂಕಗಳೊಂದಿಗೆ ಬಿ.ಕಾಂ/ಬಿ.ಎಸ್.ಸಿ/ಬಿ.ಸಿ.ಎ/ಬಿ.ಬಿ.ಎ/ಬಿ.ಇ/ಸಿ.ಎ ಪದವಿ ಪಡೆದಿರಬೇಕು. ಸ್ನಾತಕೊತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಅನುಭವವುಳ್ಳ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
✓ ಸಿಪಾಯಿ/ವಾಹನ ಚಾಲಕ ಹುದ್ದೆಗೆ; ಎಸ್ಸೆಸ್ಸೆಲ್ಸಿ ಉತ್ತೀರ್ಣ/ವಾಹನ ಚಾಲನ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಪ.ಜಾತಿ ಹಾಗೂ ಪ. ಅಂಗಳದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆಗರಿಷ್ಠ ವಯಸ್ಸಿನ ಮಿತಿ – 38 ವರ್ಷಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
ಸಂದರ್ಶನ
ದಾಖಲೆ ಪರಿಶೀಲನೆ
ಸಂಬಳ:
ಕಿರಿಯ ಸಹಾಯಕರು ಹುದ್ದೆಗಳಿಗೆ – ₹27,650-52,650 ಸಿಪಾಯಿ/ವಾಹನ ಚಾಲಕರ ಹುದ್ದೆಗಳಿಗೆ – ₹19,950-37,900
ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ₹1000 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – ₹500
ಅರ್ಜಿ ಸಲ್ಲಿಸುವ ವಿಧಾನ:
• ಮೊದಲಿಗೆ ಅಭ್ಯರ್ಥಿಗಳು CMSBANK ಅಧಿಕೃತ ಜಾಲತಾಣ https://www.cmsbank.in/notifications/ಕ್ಕೆ ಭೇಟಿ ನೀಡಿ.
• ನಂತರ *ಅಧಿಸೂಚನೆಗಳು* ವಿಭಾಗದ ಕೆಳಗೆ ನೀಡಲಾಗಿರುವ “ಉದ್ಯೋಗ ಅದಿಸೂಚನೆ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಉದ್ಯೋಗ ಅಧಿಸೂಚನೆ ಹಾಗೂ ಅರ್ಜಿ ನಮೂನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ. ಅಥವಾ ನೇರವಾಗಿ ಇಲ್ಲಿ ಕ್ಲಿಕ್ ಮಾಡಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ಹಸ್ತಾಕ್ಷರ ವಿರುವ ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.
• ಅರ್ಜಿ ಶುಲ್ಕದ ಡಿ.ಡಿ ಅನ್ನು ‘ವ್ಯವಸ್ಥಾಪಕರು, ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ ಹೆಸರಿನಿಂದ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಿ.
• ಈ ಕೆಳಗಿನ ವಿಳಾಸಕ್ಕೆ ಮಾರ್ಚ್ 06ರೊಳಗೆ ತಲುಪುವಂತೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ, ಮೀನಾಕ್ಷಿ ಚೌಕ, ಮಿರ್ದೆ ಗಲ್ಲಿ, ವಿಜಯಪುರ-586101