ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಸಲು ಮಾ.೦6ರ ಗಡುವು | ತಿಂಗಳಿಗೆ ₹19,950 ರಿಂದ 52,650 ವೇತನ

Published on:

ವಿಜಯಪುರ: ಜಿಲ್ಲೆಯ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನಲ್ಲಿ ಕಿರಿಯ ಸಹಾಯಕ ಮತ್ತು ಸಿಪಾಯಿ/ವಾಹನ ಚಾಲಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಂಡಿದೆ.

05 ಕಿರಿಯ ಸಹಾಯಕ ಹಾಗೂ 05 ಸಿಪಾಯಿ/ವಾಹನ ಚಾಲಕ ಸೇರಿದಂತೆ ಒಟ್ಟು 10 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಎಸ್ಸೆಸ್ಸೆಲ್ಸಿ, ಸಂಬಂಧಿತ ವಿಷಯದಲ್ಲಿ ಪದವಿ ಪಡೆದಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಬ್ಯಾಂಕಿನ ಅಧಿಕೃತ ಜಾಲತಾಣ(https://www.cmsbank.in/notifications/)ದಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ನಿಗದಿತ ದಾಖಲೆಗಳನ್ನು ಲಗತ್ತಿಸಿ, ‘ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ, ಮೀನಾಕ್ಷಿ ಚೌಕ, ಮಿರ್ದೆ ಗಲ್ಲಿ, ವಿಜಯಪುರ-586101’ಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತೆರೆಳಿ ಮಾ.06ರೊಳಗೆ ತಲುಪಿಸುವ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಫೆಬ್ರವರಿ 13, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 06, 2026

ಶೈಕ್ಷಣಿಕ ಅರ್ಹತೆ:

✓ ಕಿರಿಯ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಧಿಕೃತ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ.70% ಅಂಕಗಳೊಂದಿಗೆ ಬಿ.ಕಾಂ/ಬಿ.ಎಸ್.ಸಿ/ಬಿ.ಸಿ.ಎ/ಬಿ.ಬಿ.ಎ/ಬಿ.ಇ/ಸಿ.ಎ ಪದವಿ ಪಡೆದಿರಬೇಕು. ಸ್ನಾತಕೊತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಅನುಭವವುಳ್ಳ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

✓ ಸಿಪಾಯಿ/ವಾಹನ ಚಾಲಕ ಹುದ್ದೆಗೆ; ಎಸ್ಸೆಸ್ಸೆಲ್ಸಿ ಉತ್ತೀರ್ಣ/ವಾಹನ ಚಾಲನ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು

ಪ.ಜಾತಿ ಹಾಗೂ ಪ. ಅಂಗಳದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆಗರಿಷ್ಠ ವಯಸ್ಸಿನ ಮಿತಿ – 38 ವರ್ಷಗಳು
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು

ಆಯ್ಕೆ ವಿಧಾನ:

  • ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
  • ಸಂದರ್ಶನ
  • ದಾಖಲೆ ಪರಿಶೀಲನೆ

ಸಂಬಳ:

ಕಿರಿಯ ಸಹಾಯಕರು ಹುದ್ದೆಗಳಿಗೆ – ₹27,650-52,650
ಸಿಪಾಯಿ/ವಾಹನ ಚಾಲಕರ ಹುದ್ದೆಗಳಿಗೆ – ₹19,950-37,900

ಅರ್ಜಿ ಶುಲ್ಕ:

ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ₹1000
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – ₹500

ಅರ್ಜಿ ಸಲ್ಲಿಸುವ ವಿಧಾನ:

• ಮೊದಲಿಗೆ ಅಭ್ಯರ್ಥಿಗಳು CMSBANK ಅಧಿಕೃತ ಜಾಲತಾಣ https://www.cmsbank.in/notifications/ಕ್ಕೆ ಭೇಟಿ ನೀಡಿ.

• ನಂತರ *ಅಧಿಸೂಚನೆಗಳು* ವಿಭಾಗದ ಕೆಳಗೆ ನೀಡಲಾಗಿರುವ “ಉದ್ಯೋಗ ಅದಿಸೂಚನೆ” ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಉದ್ಯೋಗ ಅಧಿಸೂಚನೆ ಹಾಗೂ ಅರ್ಜಿ ನಮೂನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ. ಅಥವಾ ನೇರವಾಗಿ ಇಲ್ಲಿ ಕ್ಲಿಕ್‌ ಮಾಡಿ.

• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ಹಸ್ತಾಕ್ಷರ ವಿರುವ ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.

• ಅರ್ಜಿ ಶುಲ್ಕದ ಡಿ.ಡಿ ಅನ್ನು ‘ವ್ಯವಸ್ಥಾಪಕರು, ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ ಹೆಸರಿನಿಂದ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಿ.

• ಈ ಕೆಳಗಿನ ವಿಳಾಸಕ್ಕೆ ಮಾರ್ಚ್ 06ರೊಳಗೆ ತಲುಪುವಂತೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ ನಿ., ವಿಜಯಪುರ, ಮೀನಾಕ್ಷಿ ಚೌಕ, ಮಿರ್ದೆ ಗಲ್ಲಿ, ವಿಜಯಪುರ-586101

Important Direct Links:

Official Notification PDFDownload
Application Form PDFDownload
Official Websitecmsbank.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ”

Leave a Comment