ಪ್ರಸಕ್ತ ಸಾಲಿನಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ 20000ರೂ.ಗಳ ಸಹಾಯಧನವನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಅಧಿಕೃತ ಪೋರ್ಟಲ್ https://sevasindhuservices.karnataka.gov.in/ಮೂಲಕ ಅರ್ಜಿ ಸಲ್ಲಿಸಬಹುದು.
ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಜುಲೈ 15, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 15, 2025
ವಯೋಮಿತಿ:
45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಯಾತ್ರಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ಯಾತ್ರಾರ್ಥಿಯು ಕಡ್ಡಾಯವಾಗಿ, ಬದರೀನಾಥ್, ಕೇದಾರ್‌ನಾಥ್, ಯಮುನೋತ್ರಿ ಮತ್ತು ಗಂಗೋತ್ರಿ ಕ್ಷೇತ್ರಗಳಿಗೆ ಭೇಟಿ ನೀಡಿರಬೇಕು.
ಸಹಾಯಧನದ ಮೊತ್ತ:
ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ 20000 ರೂ. ಸಹಾಯಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ -1
- ಆಧಾರ್ ಕಾರ್ಡ್‌ನ ಎರಡೂ ಕಡೆ (both sides) ತಪ್ಪದೇ ಅಪ್‌ಲೋಡ್ ಮಾಡಬೇಕು.
- ಚುನಾವಣಾ ಗುರುತಿನ ಚೀಟಿ/ರೇಷನ್ ಕಾರ್ಡ್
- ಯಾತ್ರಾರ್ಥಿಯು 100ರೂ. ಗಳ ಛಾಪಾ ಕಾಗದ (E-Stamp Paper) ದಲ್ಲಿ ಈ ಹಿಂದೆ ಸಹಾಯಧನವನ್ನು ಪಡೆದಿಲ್ಲವೆಂದು ಸ್ವದೃಢೀಕರಿಸಿ ನೋಟರಿ ಮೊಹರು ಮತ್ತು ಸಹಿಯೊಂದಿಗೆ ದೃಢೀಕರಣವನ್ನು ಅಪ್‌ಲೋಡ್ ಮಾಡಬೇಕು.
- ಯಾತ್ರೆ ಕೈಗೊಳ್ಳುವ ಮುನ್ನ ಯಾತ್ರೆಗೆ ನೋಂದಾಯಿಸಿಕೊಂಡ ಪ್ರತಿ.
- ಯಾತ್ರೆ ಮುಗಿದ ನಂತರ ಉತ್ತರಖಂಡ್ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೀಡಲಾದ ಪ್ರಮಾಣ ಪತ್ರ (ಕಡ್ಡಾಯವಾಗಿ 4 ಧಾಮಗಳು ನಮೂದಿಸಿರಬೇಕು)
ವಿಶೇಷ ಸೂಚನೆ:
- ಅನುದಾನ ಲಭ್ಯತೆಗೆ ಅನುಗುಣವಾಗಿ ಸರ್ಕಾರದ ಮಾರ್ಗಸೂಚಿಯನ್ವಯ ಅನುದಾನವನ್ನು ವಿತರಿಸಲಾಗುವುದು.
- ಸರ್ಕಾರದ ಮಾರ್ಗಸೂಚಿಯನ್ವಯ ಆಯಾಯಾ ವರ್ಷದ ಅನುದಾನವನ್ನು ಆಯಾಯಾ ವರ್ಷ ಪಾವತಿಸಲು ಅವಕಾಶವಿರುವುದರಿಂದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಮಾಡಿಸಿರಬೇಕು. ನಿಗದಿತ ದಿನಾಂಕದೊಳಗೆ ಮಾಡಿಸದಿದ್ದಲ್ಲಿ ತಾವೇ ನೇರ ಜವಾಬ್ದಾರರು.
- ಅವಧಿ ಮುಗಿದ ನಂತರ ಸಹಾಯಧನ ಕೋರಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
How to Apply for Char Dham Yatra Subsidy Online?
ಅರ್ಜಿ ಸಲ್ಲಿಸುವ ವಿಧಾನ;
- ಸೇವಾ ಸಿಂಧು ಅಧಿಕೃತ ಪೋರ್ಟಲ್
https://sevasindhuservices.karnataka.gov.in/ಗೆ ಭೇಟಿ ನೀಡಿ. - ಇ-ಮೇಲ್ ಐಡಿ / ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ನಮೂದಿಸಿ ಸಲ್ಲಿಸಿ.
- 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ಅರ್ಜಿ ನಮೂನೆ ಆಯ್ಕೆ ಮಾಡಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ. ಭಾವಚಿತ್ರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಿ. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 26709689/26706775ಗೆ ಸಂಪರ್ಕಿಸಬಹುದು ಎಂದು ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Important Direct Links:
Char Dham Yatra Subsidy Online Registration 2025 Link | Apply Now |
Official Website | itms.kar.nic.in |
More Updates | KarnatakaHelp.in |