ಬೆಂಗಳೂರಿನ ಚಾರ್ಟರ್ಡ್ ಸಹಕಾರಿ ಬ್ಯಾಂಕಿನಲ್ಲಿ ಕಿರಿಯ ಸಹಾಯಕ ಮತ್ತು ಚಾಲಕ ಕಮ್ ಅಟೆಂಡರ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಿರಿಯ ಸಹಾಯಕ(07), ಚಾಲಕ ಕಮ್ ಅಟೆಂಡರ್(02) ಸೇರಿದಂತೆ ಒಟ್ಟು 09 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://www.csbank.in/recruitment.phpದಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ, ಜೊತೆಗೆ ನಿಗದಿತ ದಾಖಲೆಗಳನ್ನು ಫೆ.18ರೊಳಗೆ ‘ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ, ನಂ. 1, 1ನೇ ಮುಖ್ಯ ರಸ್ತೆ, 1ನೇ ಬ್ಲಾಕ್, ಕೋರಮಂಗಲ, ಬೆಂಗಳೂರು-560034’ಗೆ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪಿಸಬೇಕು.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 18, 2026
ಶೈಕ್ಷಣಿಕ ಅರ್ಹತೆ
✓ ಕಿರಿಯ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪ್ರಥಮ ದರ್ಜೆಯಲ್ಲಿ ಪದವಿ ಪೂರ್ಣಗೊಳಿಸಿರಬೇಕು. (ಪದವಿಯ ಎಲ್ಲಾ ವರ್ಷದ ಸರಾಸರಿ ಶೇಕಡ 60% ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು) ಬಿ.ಕಾಂ., /ಎಂ.ಕಾಂ., / ಎಂ.ಬಿ.ಎ (Finance) ನಲ್ಲಿ ತೇರ್ಗಡೆಯಾದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
• ಅಭ್ಯರ್ಥಿಗಳು ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ನಲ್ಲಿ ಜ್ಞಾನ ಹೊಂದಿರಬೇಕು ಹಾಗೂ ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥ ಮಾಡಿಕೊಳ್ಳಬೇಕು.
✓ ಚಾಲಕ ಕಮ್ ಅಟೆಂಡರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು ಹಾಗೂ ಕಾನೂನುಬದ್ಧ ಲಘು ಮೋಟಾರು ವಾಹನದ ಡೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಇತರೆ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು ಹಿಂದುಳಿದ ಜಾತಿ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 38 ವರ್ಷಗಳು ಪರಿಶಿಷ್ಟ ಜಾತಿ, ಪರಿಶಿಷ್ಟವರ್ಗ ಹಾಗೂ ಪ್ರವರ್ಗ- 1 ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ವರ್ಗದ ಅಭ್ಯರ್ಥಿಗಳಿಗೆ – ₹1,200 ಇತರೆ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ – ₹2,000
• ಅರ್ಜಿ ಶುಲ್ಕವನ್ನು “Chartered Sahakari Bank Niyamitha” ಹೆಸರಿಗೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• ಮೊದಲಿಗೆ ಅಭ್ಯರ್ಥಿಗಳು CSBANK ಅಧಿಕೃತ ಜಾಲತಾಣ https://www.csbank.in/recruitment.php#Recruitmentಕ್ಕೆ ಭೇಟಿ ನೀಡಿ.
• ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ನೇಮಕಾತಿ ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ಅರ್ಜಿ ನಮೂನೆಯನ್ನು ಇಲ್ಲಿ ಡೌನ್ಲೋಡ್ ಮಾಡಿ – ಇಲ್ಲಿ ಕ್ಲಿಕ್ ಮಾಡಿ” ಆಯ್ಕೆಯ ಮೇಲೆ ಟ್ಯಾಪ್ ಮಾಡಿ.
• ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರಗಳನ್ನು ನಮೂದಿಸಿ, ಅರ್ಜಿ ಶುಲ್ಕದ ಡಿ.ಡಿ., ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಎಲ್ಲಾ ವರ್ಷಗಳ ಪದವಿ ಅಂಕ ಪಟ್ಟಿ, ಎಸ್.ಎಸ್.ಎಲ್.ಸಿ. ಅಂಕ ಪಟ್ಟಿ ಪ್ರಮಾಣ ಪತ್ರ, ಜನ್ಮ ದಿನಾಂಕ ದೃಢೀಕರಣಗಳ ನಕಲು ಮತ್ತು ಅನುಭವ ಪತ್ರಗಳನ್ನು ಸ್ವದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ.
• ಲಕೋಟೆ ಮೇಲೆ (ನೀವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ನಮೂದಿಸಿ) ____ ಹುದ್ದೆಗಾಗಿ ಅರ್ಜಿ ಎಂದು ನಮೂದಿಸಿ.
ಈ ಕೆಳಗಿನ ವಿಳಾಸಕ್ಕೆ ಫೆಬ್ರವರಿ 18 ರೊಳಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ತಲುಪುವಂತೆ ಕಳುಹಿಸಬೇಕು.
ವಿಳಾಸ: ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ, ನಂ. 1, 1ನೇ ಮುಖ್ಯ ರಸ್ತೆ, 1ನೇ ಬ್ಲಾಕ್, ಕೋರಮಂಗಲ, ಬೆಂಗಳೂರು-560034