Chikkaballapur Library Supervisor Vacancy 2024: ಚಿಕ್ಕಬಳ್ಳಾಪುರ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ

Follow Us:

ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಪಾಲಕರು ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಪಾಲಕರು ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಒಟ್ಟು 21 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇದೆಯೋ ಆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರವನ್ನು ಅಪಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ ಸೈಟ್ https://chikkaballapur.nic.in ಮೂಲಕ ಸೆಪ್ಟೆಂಬರ್ 21ರ ಒಳಗೆ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. Chikkaballapur Library Supervisor Vacancy 2024 ಈ ಲೇಖನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ನೇಮಕಾತಿ 2024ರ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.

Chikkaballapur Library Supervisor Vacancy 2024
Chikkaballapur Library Supervisor Vacancy 2024

Shortview of Chikkaballapur Library Supervisor Recruitment 2024

Organization Name – Chikkaballapur District Panchayat
Post Name – Library Supervisor
Application Process: Online
Job Location – Chikkaballapur

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭದ ದಿನಾಂಕ: ಸೆಪ್ಟೆಂಬರ್ 2, 2024.
  • ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ – ಸೆಪ್ಟೆಂಬರ್ 21, 2024.

ವಿದ್ಯಾರ್ಹತೆ:

ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪದವಿ ಪೂರ್ವ ಪರೀಕ್ಷಯಲ್ಲಿ ಉತ್ತೀರ್ಣರಾಗಿರಬೇಕು.

ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪಡೆದುಕೊಂಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷದ ಮೇಲೆ ಇರಬೇಕು

  • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷಗಳು
  • ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷಗಳು
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ – ಗರಿಷ್ಠ 40

ವೇತನ:

ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸುವ ಗೌರವ ಸಂಭಾವನೆ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ₹500
  • ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಗೆ ಸೇರಿ ಅಭ್ಯರ್ಥಿಗಳಿಗೆ – ₹200
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ₹200
  • ವಿಶೇಷ ಚೇತನ ಅಭ್ಯರ್ಥಿಗಳಿಗೆ – ₹100

ಪಾವತಿ ವಿಧಾನ – ಬ್ಯಾಂಕಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಲೈಬ್ರರಿ ಖಾತೆಗೆ ಪಾವತಿ ಮಾಡಿ ಚಲನ್ ಅರ್ಜಿ ಸಲ್ಲಿಸುವ ಸಮಯದಲ್ಲಿ ಅಪ್ಲೋಡ್ ಮಾಡಬೇಕು.

How to Apply for Chikkaballapur Gram Panchayat Recruitment 2024

ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ ಸೈಟ್ https://chikkaballapur.nic.in ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ಪಂಚಾಯತಿಯ ಆಡಳಿತ ಶಾಖೆಯ ದೂರವಾಣಿ ಸಂಖ್ಯೆ – 08156-277016 ಸಂಪರ್ಕ ಮಾಡಬಹುದು.

Important Direct Links:

Official Notification PDFDownload
Online Application Form LinkApply Here
Official Websitechikkaballapur.nic.in
More UpdatesKarnataka Help.in

Leave a Comment